Accident – ರಾಜ್ಯದ ಎರಡು ಕಡೆ ಭೀಕರ ಅಪಘಾತ – 5 ಮಂದಿ ಸಾವು
ಮುಂದೆ ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಸ್ವಿಫ್ ಕಾರು ಡಿಕ್ಕಿ ಹೊಡೆದಿದ್ದು, ಕಾರು ಚಾಲಕ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ತಂದೆ ಮಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಅವಿನಾಶ್ (28), ಪ್ರಣತಿ (5) ಸೌಖ್ಯ (4) ಮೃತ ದುರ್ಧೈವಿಗಳು.
ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 48 ತರೂರು ಗೇಟ್ ಬಳಿ ಈ ಘಟನೆ ನಡೆದಿದೆ. ಶಿರಾ ತಾಲೂಕಿನ ಕಡವಿಗೆರೆ ಗ್ರಾಮದಿಂದ ನೆಲಹಾಳ್ ಗೆ ಕಾರು ತೆರಳುತ್ತಿತ್ತು.
ಲಾರಿಗೆ ಡಿಕ್ಕಿಯಾದ ರಭಸಕ್ಕೆ ಸ್ವಿಫ್ಟ್ ಕಾರು ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರು ಮತ್ತೋರ್ವ ಬಾಲಕಿ ತೀವ್ರವಾಗಿ ಗಾಯಗೊಂಡಿದ್ದು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿಯಲ್ಲೂ ಬೆಳ್ಗಂ ಬೆಳಿಗ್ಗೆ ಅಫಘಾತ ಸಂಭವಿಸಿದೆ. ಶಾಲಾ ಬಸ್ ಮತ್ತು ಟ್ರಕ್ ಅಪಘಾತಕ್ಕೆ ಈಡಾಗಿದ್ದು, ಬಸ್ ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಪ್ಪತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ಬನಜವಾಡ ಶಿಕ್ಷಣ ಸಂಸ್ಥೆಯ ಕಾಲೇಜು ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದಿದೆ. ಅಥಣಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ








