ಬೈಕ್ ಹಾಗೂ ಲಾರಿ ನಡುವೆ ಅಪಘಾತ : ಸವಾರ ಸಾವು
ತುಮಕೂರು : ಬೈಕ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಕುಳಿತಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಬಳಿ ನಡೆದಿದೆ.
ಸಾಗರನಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಅಪಘಾತ ಸಂಭವಿಸಿದೆ.
ಅಪಘಾತದಿಂದ ಬೈಕ್ ಗೆ ಬೆಂಕಿ ಹತ್ತಿಕೊಂಡು ಸುಟ್ಟು ಕರಕಲಾಗಿದೆ.
ಗಾಯಗೊಂಡ ಮಹಿಳೆಯನ್ನು ಗುಬ್ಬಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ.
ಮೃತಪಟ್ಟ ವ್ಯಕ್ತಿ ಮತ್ತು ಗಾಯಗೊಂಡ ಮಹಿಳೆಯ ಬಗ್ಗೆ ಮಾಹಿತಿ ತಿಳಿದು ಬರಬೇಕಿದೆ.
ಸ್ಥಳಕ್ಕೆ ಗುಬ್ಬಿ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.