ಬೆಂಗಳೂರು: ಲಾರಿ ಹಾಗೂ ಬಿಎಂಟಿಸಿ (BMTC) ವೋಲ್ವೋ ಬಸ್ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ.
ಈ ಘಟನೆ ಏರ್‌ಪೋರ್ಟ್ ರಸ್ತೆಯ ಮೇಲ್ಸೇತುವೆ ಮೇಲೆ ನಡೆದಿದೆ. ಲಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾವನ್ನಪ್ಪಿದವರ ಮಾಹಿತಿ ಇನ್ನೂ ದೊರೆತಿಲ್ಲ. ಯಲಹಂಕ ಮೇಲ್ಸೇತುವೆ ಮೇಲೆ ಇನೋವಾ ಕಾರಿಗೆ (Car) ಮೊದಲು ಸಿಮೆಂಟ್ ಲಾರಿ ಡಿಕ್ಕಿ ಹೊಡೆದಿತ್ತು. ಆಗ ಲಾರಿ ಚಾಲಕ ಹಾಗೂ ಕಾರಿನ ಚಾಲಕ ಇಬ್ಬರು ಬಲಭಾಗದಲ್ಲಿ ನಿಲ್ಲಿಸಿಕೊಂಡು ಗಲಾಟೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ವೇಗವಾಗಿ ಬಂದ ಬಸ್ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಬಸ್‍ನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಬಸ್‍ನಲ್ಲಿ ಏರ್‌ಪೋರ್ಟ್‌ಗೆ ಹೋಗುವ ಒಬ್ಬರೆ ಪ್ರಯಾಣಿಕರಿದ್ದರು. ಹೀಗಾಗಿ ಹೆಚ್ಚಿನ ಅವಘಡ ಸಂಭವಿಸಿಲ್ಲ ಎನ್ನಲಾಗಿದೆ. ಈ ಕುರಿತು ಯಲಹಂಕ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.