ಲಾರಿಗೆ ವೋಲ್ವೋ ಬಸ್ ಡಿಕ್ಕಿ | 25 ಜನರಿಗೆ ಗಾಯ
ಚಿಕ್ಕಬಳ್ಳಾಪುರ: ಲಾರಿಗೆ ವೋಲ್ವೋ ಬಸ್ ಡಿಕ್ಕಿಯಾಗಿ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಹೊರವಲಯದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 44ರ ಮಂಚನಬಲೆ ಗೇಟ್ ಬಳಿ ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಕಲ್ಲಡ ಟ್ರಾವೆಲ್ಸ್ನ ಬಸ್ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಓಲ್ವೋ ಬಸ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ