ಶಿವಮೊಗ್ಗ: ಕಾರು ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಾರು ಚೇಸ್ ಮಾಡಲು ಹೋಗಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ಘಟನೆ ಶಿವಮೊಗ್ಗದ (Shivamogga) ಸಿದ್ದಯ್ಯ ರೋಡ್ ಸರ್ಕಲ್ ಬಳಿ ನಡೆದಿದೆ.
ಹೊಸ ವರ್ಷದ ಗುಂಗಿನಲ್ಲಿದ್ದ ಬೈಕ್ ಸವಾರ, ಕಾರಿಗೆ ಕಲ್ಲು ಎಸೆದಿದ್ದಾನೆ. ಆನಂತರ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಇದರಿಂದ ಸಿಟ್ಟಗೆದ್ದ ಕಾರು ಚಾಲಕ ಬೈಕ್ ಚೇಸ್ ಮಾಡಿಕೊಂಡು ಬಂದಿದ್ದ. ಈ ವೇಳೆ ಗಾಯತ್ರಿ ಶಾಲೆ ಬಳಿ ಹಂಪ್ ಕಾಣದೆ ಇಬ್ಬರು ಸವಾರರು ಕಾರು ಮತ್ತು ಬೈಕ್ ನ್ನು ಜಿಗಿದಿಸಿದ್ದಾರೆ. ಆಗ ಕಾರು ಪಲ್ಟಿಯಾಗಿ ಬೈಕ್ ಗೆ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








