ಬೆಂಗಳೂರು: ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಿಲ್ಲೆಯ ಆನೇಕಲ್ ತಾಲೂಕಿನ ಬಳಗಾರನಹಳ್ಳಿ ಹತ್ತಿರ ಈ ಘಟನೆ ನಡೆದಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಸಂತೋಷ್(28) ಸಾವನ್ನಪ್ಪಿದ ದುರ್ದೈವಿ ಎನ್ನಲಾಗಿದೆ.
ಬೈಕ್ ನಲ್ಲಿ ಹಿಂಬದಿ ಸವಾರಿ ಮಾಡುತ್ತಿದ್ದ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಅತ್ತಿಬೆಲೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








