ಬಾಗಲಕೋಟೆ : ಎರಡು ಬೈಕ್ ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವ್ಯಕ್ತಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಬಾದಾಮಿಯ ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಹಂಗರಗಿ ಗ್ರಾಮದ ನಿವಾಸಿ ಸುಭಾಷ್ ಗಾಣಿಗೇರ(28), ಮಂಗಳಗುಡ್ಡ ಗ್ರಾಮದ ಕೆಂಚಪ್ಪ ಮಾದರ(25) ಸಾವನ್ನಪ್ಪಿದ ದುರ್ದೈವಿಗಳು. ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು, ಬಾದಾಮಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಾದಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.








