ಎರಡು ಕಾರುಗಳ ಮಧ್ಯೆ ಭೀಕರ ರಸ್ತೆ ಅಪಘಾತ – ಇಬ್ಬರ ಸಾವು
ತುಮಕೂರು: ಎರಡು ಕಾರುಗಳ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ ಇಬ್ಬರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಬಿದರೆಗುಡಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.
ಮೃತರನ್ನು ಸ್ವಿಫ್ಟ್ ಕಾರಿನಲ್ಲಿದ್ದ ಸಿಎಸ್ ಪುರ ಗ್ರಾಮದ ರಾಜೇಶ್ (32) ಮತ್ತು ಬೆಲವತ್ತ ಗ್ರಾಮದ ವೆಂಕಟಾಚಲ(41) ಎಂದು ಗುರುತಿಸಲಾಗಿದೆ.ಮತ್ತೊಂದು ಕಾರಿನಲ್ಲಿದ್ದ ಓರ್ವ ಪ್ರಯಾಣಿಕನ ಕಾಲು ಮುರಿದಿದೆ. ಗಾಯಗೊಂಡಿರುವ ಇನ್ನೂ ಮೂವರನ್ನು ತಿಪಟೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನಿಡಲಾಗುತ್ತಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡಿಸಿದ್ದಾರೆ. ಈ ಸಂಬಂಧ ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾಮರಾಜನಗರ: ಬೆಂಗಳೂರಿನಿಂದ ಊಟಿಗೆ ತೆರಳುತ್ತಿದ್ದ ಹೈದರಾಬಾದ್ ಮೂಲದ ಪ್ರವಾಸಿಗರ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕಲಿಗೌಡನನಹಳ್ಳಿ ಗೇಟ್ ಬಳಿ ನಡೆದಿದೆ. ಅಪಘಾತದಲ್ಲಿ ಹೈದರಾಬಾದ್ ಮೂಲದ ಜಯಲಕ್ಷ್ಮಿ(50) ಮೃತಪಟ್ಟಿದ್ದು, ಗಾಯಗೊಂಡ ವೆಂಕಯ್ಯ(54),ರಾಜೇಶ್, ಪದ್ಮಾವತಿ ಹಾಗೂ ಇಬ್ಬರು ಮಕ್ಕಳನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ