ಅಪಘಾತದಲ್ಲಿ ಗಾಯಗೊಂಡಿದ್ದ ಯೋಧ ಚಿಕಿತ್ಸೆ ಫಲಕಾರಿಯಾಗದೆ ಯೋಧ ಹುತಾತ್ಮ
ಹಾಸನ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯೋಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ.
ಸಂಜಯ್ (22) ಮೃತ ಯೋಧ. ಸಂಜಯ್ ಕಾಶ್ಮೀರದಲ್ಲಿ ರಾಷ್ಟ್ರೀಯ ರೈಫಲ್ಸ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ರಜೆಯ ಮೇರೆಗೆ ಊರಿಗೆ ಬಂದಿದ್ದರು.
ಹೊನ್ನೇನಹಳ್ಳಿ ಗ್ರಾಮದ ಸಂಜಯ್, ಹಾಸನದ ದಾಸರಕೊಪ್ಪ ನಿವಾಸಿಯಾದ ಯೋಧ ಮೂರು ದಿನಗಳ ಹಿಂದೆ ಎಂ. ಜಿ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಇಂದು ಯೋಧ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ. ಘಟನೆಯಿಂದ ಪೋಷಕರು, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.








