ಮೈಸೂರು : ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಯುವಕನೊಬ್ಬನಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ನಂಜನಗೂಡು (Nanjangud) ಜೆಎಸ್ಎಸ್ ಪಾಲಿಟೆಕ್ನಿಕ್ ಕಾಲೇಜಿನ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ಅಲ್ಲಿಯ ಈದ್ಗಾ ಮೈದಾನದ ನಿವಾಸಿ ಮುಬಾರಕ್ (28) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಯುವಕ ಮೈಸೂರಿಗೆ ತೆರಳುವುದಕ್ಕಾಗಿ ರಸ್ತೆ ದಾಟುತ್ತಿದ್ದ. ಈ ಸಂದರ್ಭದಲ್ಲಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ನಂಜನಗೂಡಿನ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.