ಪೊಲೀಸರಿಂದ ತಪ್ಪಿಸಿಕೊಳ್ಳುವಾಗ ಅಫಘಾತ, ಇಬ್ಬರು ಯುವಕರ ಸಾವು
ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರಸ್ತೆ ಅಪಘಾತವಾಗಿದ್ದು, ಇಬ್ಬರು ಯುವಕರು ಸ್ಥಳದಲ್ಲಿ ಸಾವನಪ್ಪಿದ್ದು, ಓರ್ವ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ನಂಜನಗೂಡು ಬಳಿ ನಡೆದಿದೆ.
ಮೈಸೂರಿನ ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಮೃತಪಟ್ಟವರನ್ನ ಕೂಡ್ಲಾಪುರದ ಸಚಿನ್, ಉತ್ತನಹಳ್ಳಿಯ ದೊರೆಸ್ವಾಮಿ ಎಂದು ಗುರುತಿಸಲಾಗಿದೆ.
ನಂಜನಗೂಡಿನ ಸಿಂಧುವಳ್ಳಿ ಬಳಿಯ ಹುಣಸನಾಳು ಗ್ರಾಮಕ್ಕೆ ಬೈಕ್‌ನಲ್ಲಿ ಮೂವರು ಯುವಕರು ಟ್ರಿಪಲ್ ರೈಡ್ ಹೋಗುತ್ತಿದ್ದರು. ದೂರದಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿರುವುದನ್ನು ಗಮನಿಸಿದ್ದಾರೆ. ಪೊಲೀಸರನ್ನು ಕಂಡು ವಾಪಸ್ ಹಿಂದಕ್ಕೆ ಹೋಗಲು ಯೂಟರ್ನ್ ತೆಗೆದುಕೊಳ್ಳಲು ಯತ್ನಿಸಿದ್ದಾರೆ.
ಇದೇ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೈಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟರೆ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.