ಮೈಸೂರು : ಆಕಸ್ಮಿಕವಾಗಿ ಬೆಂಕಿ ಹೊತ್ತಿದ ಪರಿಣಾಮ ಎಟಿಎಂ ಮಷಿನ್ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ನಗರದ ಕೆ.ಆರ್. ನಗರದ ಬಸ್ ನಿಲ್ದಾಣದಲ್ಲಿನ ಕರ್ಣಾಟಕ ಬ್ಯಾಂಕ್ಗೆ ಸೇರಿದ ಎಟಿಎಂ ಕೇಂದ್ರದಲ್ಲಿ ಅಗ್ನಿ (fire) ಅವಘಡ ಸಂಭವಿಸಿದ್ದು, ಎಟಿಎಂ ಮಷಿನ್ ಹೊತ್ತಿ ಉರಿದಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇತ್ತೀಚೆಗಷ್ಟೇ ರಸ್ತೆ ಬದಿ ನಿಂತಿದ್ದ 3 ಖಾಸಗಿ ಬಸ್ಗಳು ಬೆಂಕಿಗಾಹುತಿಯಾಗಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯ ಆರ್.ವಿ.ಇಂಜಿನಿಯರಿಂಗ್ ಕಾಲೇಜು ಹತ್ತಿರ ನಡೆದಿತ್ತು. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ.