ಚಿಕ್ಕಮಗಳೂರು: ಪಟಾಕಿಗೆ ಆಕಸ್ಮಿಕ ಬೆಂಕಿ ತಗಲಿ ಸಿಡಿದ ಪರಿಣಾಮ ಯುವಕ ಸಾವನ್ನಪ್ಪಿ, ಮತ್ತೋರ್ವ ಯುವಕ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ತರಿಕೆರೆಯ (Tarikere) ಸುಣ್ಣದ ಹಳ್ಳಿಯಲ್ಲಿ ನಡೆದಿದೆ. ಕುರ್ಚಿಯ ಕೆಳಗೆ ಪಟಾಕಿ ಚೀಲ ಇಟ್ಟು ಯುವಕ ಕುಳಿತಿದ್ದ. ಆದರೆ, ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಪಟಾಕಿಗೆ ಬೆಂಕಿ ತಗುಲಿದ್ದು, ಯುವಕ ಕುರ್ಚಿಯ ಸಮೇತ 5 ಅಡಿ ಎತ್ತರಕ್ಕೆ ಹಾರಿ ಬಿದ್ದಿದ್ದಾನೆ. ಈ ಸಂದರ್ಭದಲ್ಲಿ ದೇಹದ ಸೂಕ್ಷ್ಮ ಭಾಗಗಳಿಗೆ ಹೆಚ್ಚಿನ ಪೆಟ್ಟಾಗಿದೆ. ಪರಿಣಾಮ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಪ್ರದೀಪ್ (30) ಸಾವನ್ನಪ್ಪಿದ ಯುವಕ ಎಂದು ಗುರುತಿಸಲಾಗಿದೆ. ಅಲ್ಲದೇ, ಮತ್ತೊಬ್ಬ ಯುವಕನ ಸ್ಥಿತಿ ಕೂಡ ಗಂಭೀರವಾಗಿದೆ ಎನ್ನಲಾಗಿದೆ. ಮೂವರು ಮಕ್ಕಳಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.








