ಬೆಳಗಾವಿ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರು ಪಕ್ಷದ ವರಿಷ್ಠರ ಸಲಹೆ ಪಡೆದುಕೊಂಡು ಕೆಲ ಸಂಪುಟ ಸಹೋದ್ಯೋಗಿಗಳ ಖಾತೆ ಬದಲಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ( Laxman Sawadi) ಅವರು ಹೇಳಿದ್ದಾರೆ..
ಖಾತೆ ಬದಲಾವಣೆ ಕೊರೊನಾ ನಿಯಂತ್ರಿಸುವಲ್ಲಿ ವಿಫಲ ಎಂಬೋದಕ್ಕೆ ಸಾಕ್ಷಿ ಎಂಬ ಡಿಕೆಶಿ ಹೇಳಿಕೆಗೆ ಬೆಳಗಾವಿಯಲ್ಲಿ ಮಾತನಾಡಿದ ಲಕ್ಷ್ಮಣ್ ಸವದಿ (Laxman Sawadi) , ಮುಖ್ಯಮಂತ್ರಿಗಳಿಗೆ ಖಾತೆಗಳನ್ನು ಅದಲು ಬದಲು ಮಾಡುವ ಅಧಿಕಾರಿ ಇದೆ.

ವರಿಷ್ಠರ ಜೊತೆ ಚರ್ಚಿಸಿ ಮುಖ್ಯಮಂತ್ರಿಗಳು ಈ ಖಾತೆ ಬದಲಾವಣೆ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಅವರದ್ದ ರಾಜಕೀಯ ಹೇಳಿಕೆ.
ಇದನ್ನೂ ಓದಿ : ಆರ್.ಆರ್.ನಗರದಲ್ಲಿ ಕಾಂಗ್ರೆಸ್ ಆಟ ನಡೆಯಲ್ಲ, ಬಿಜೆಪಿ ಗೆಲುವು ಭ್ರಮೆ : ಹೆಚ್ ಡಿಕೆ
ಸಿದ್ದರಾಮಯ್ಯ ಸಿಎಂ ಇದ್ದಾಗ ಎರಡು ವರ್ಷ ಡಿಕೆಶಿಯನ್ನು ಮಂತ್ರಿ ಮಂಡಲದಲ್ಲಿ ಸೇರಿಸಿಕೊಂಡಿರಲಿಲ್ಲ. ಹಾಗಾದ್ರೆ, ಡಿಕೆಶಿ ಅಸಮರ್ಥರು ಅನ್ನುವ ಕಾರಣಕ್ಕೆ ಬಿಟ್ಟಿದ್ರಾ? ಕೆಲ ಸನ್ನಿವೇಶದಲ್ಲಿ, ಸಂದರ್ಭದಲ್ಲಿ ಬದಲಾವಣೆ ಮಾಡಬೇಕಾಗುತ್ತದೆ ಎಂದರು.

ಇನ್ನು ಉಪಚುನಾವಣೆಗಳ ಬಗ್ಗೆ ಮಾತನಾಡಿದ ಅವರು, ಆರ್‍ಆರ್ ನಗರ ಮತ್ತು ಶಿರಾ ಎರಡೂ ಕ್ಷೇತ್ರದ ಉಪಚುನಾವಣೆಯಲ್ಲಿ ನಮಗೆ ಗೆಲ್ಲುವ ಅವಕಾಶ ಹೆಚ್ಚಿದೆ.
ಉಪಚುನಾವಣೆಗಳಲ್ಲಿ ಆಡಳಿತ ಪಕ್ಷದ ಅಭ್ಯರ್ಥಿಗಳನ್ನೇ ಆಯ್ಕೆ ಮಾಡುವ ಮನೋಭಾವ ರಾಜ್ಯದ ಜನರಿಗಿದೆ. ಕಾರ್ಯಕರ್ತರ ಪಡೆ ದೊಡ್ಡದಿದೆ. ಮತದಾರರ ಒಲವು ಬಿಜೆಪಿ ಕಡೆಯಿದ್ದು, ಎರಡು ಕಡೆ ಗೆಲ್ಲಲು ಅವಕಾಶ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ : ಮುನಿರತ್ನಗೆ ಟಿಕೆಟ್ : ಸಿಡಿದ ಆರ್.ಆರ್.ನಗರ ಮೂಲ ಬಿಜೆಪಿಗರು
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








