ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಎ13 ಆರೋಪಿ ದೀಪಕ್ ಕುಮಾರ್ ಜೈಲಿನಿಂದ ಬಿಡುಗಡೆಯಾಗಿದ್ದಾನೆ.
ಸೋಮವಾರ ಕೋರ್ಟ್ನಲ್ಲಿ ದೀಪಕ್ ಕುಮಾರ್ಗೆ ಜಾಮೀನು ಮಂಜೂರಾಗಿತ್ತು. ಕೋರ್ಟ್ ನೀಡಿರುವ ಷರತ್ತುಗಳನ್ನು ಪೂರೈಸಿ ಜೈಲಿಗೆ ಬೇಲ್ ಕಾಪಿ ಬುಧವಾರ ರಾತ್ರಿ ಕೈಸೇರಿತ್ತು. ಈ ಹಿನ್ನೆಲೆಯಲ್ಲಿ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ದೀಪಕ್ ಕುಮಾರ್ ಬಿಡುಗಡೆಯಾಗಿದ್ದಾನೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ದರ್ಶನ್ ಮತ್ತು ಮೊದಲನೇ ಆರೋಪಿಯಾಗಿರುವ ದರ್ಶನ್ ಗೆಳತಿ ಪವಿತ್ರಾ ಗೌಡ, ದರ್ಶನ್ ಮ್ಯಾನೇಜರ್ ಆಗಿದ್ದ 11ನೇ ಆರೋಪಿ ಆರ್ ನಾಗರಾಜು, 12ನೇ ಆರೋಪಿ ಎಂ ಲಕ್ಷ್ಮಣ್ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ತಿರಸ್ಕರಿಸಿದೆ.
ಎಂಟನೇ ಆರೋಪಿ ರವಿಶಂಕರ್ ಅಲಿಯಾಸ್ ರವಿ, 13ನೇ ಆರೋಪಿ ದೀಪಕ್ ಕುಮಾರ್ ಅಲಿಯಾಸ್ ದೀಪಕ್ಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಇದಕ್ಕೂ ಮುನ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರಿಗೆ ಜಾಮೀನು ಮಂಜೂರು ಮಾಡಲಾಗಿತ್ತು.