ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

Belagavi: ಸಿನಿಮೀಯ ರೀತಿಯಲ್ಲಿ ಉದ್ಯಮಿಯನ್ನು ಅಪಹರಿಸಿದ ಆರೋಪಿಗಳು

Vivek Biradar by Vivek Biradar
January 30, 2022
in Crime, Newsbeat, ಅಪರಾಧ
Car Saaksha Tv
Share on FacebookShare on TwitterShare on WhatsappShare on Telegram

ಸಿನಿಮೀಯ ರೀತಿಯಲ್ಲಿ ಉದ್ಯಮಿಯನ್ನು ಅಪಹರಿಸಿದ ಆರೋಪಿಗಳು Saaksha Tv

ಬೆಳಗಾವಿ:  ಸಿನಿಮೀಯ ರೀತಿಯಲ್ಲಿ ಹುಬ್ಬಳ್ಳಿ ಮೂಲದ ಉದ್ಯಮಿಯೊಬ್ಬರನ್ನು ಅಪಹರಿಸಿದ ಘಟನೆ  ಬೆಳಗಾವಿಯ ಜೆಎನ್‌ಎಂಸಿ ವೈದ್ಯಕೀಯ ಕಾಲೇಜು ಬಳಿ ನಡೆದಿದೆ.

Related posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

March 4, 2026
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026

ಯಲ್ಲಾಪುರ ಮೂಲದ ಹುಬ್ಬಳ್ಳಿ ನಿವಾಸಿ ರವಿಕಿರಣ್ ಭಟ್ ಅಪಹರಣಗೊಂಡ ವ್ಯಕ್ತಿ. ಇವರು ಹುಬ್ಬಳ್ಳಿಯಿಂದ ಪುಣೆಗೆ ಕಾರಿನಲ್ಲಿ ತೆರಳುತ್ತಿದ್ದರು. ಹೀಗಾಗಿ ಜನವರಿ 13ರಂದು ತಡರಾತ್ರಿ ಬೆಳಗಾವಿ ಹೊರವಲಯದ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಮರುದಿನ ಜ‌ನವರಿ 14ರಂದು ರೆಸಾರ್ಟ್‌ನಿಂದ ಪುಣೆಯತ್ತ ತೆರಳುತಿದ್ದರು. ಈ ವೇಳೆ ರವಿಕಿರಣ್ ಅವರ ಕಾರನ್ನು ಜೆಎನ್‌ಎಂಸಿ ವೈದ್ಯಕೀಯ ಕಾಲೇಜು ಬಳಿ ಬೈಕ್‌ನಲ್ಲಿ ಬಂದಿದ್ದ ಓರ್ವ ಆರೋಪಿ ತಡೆದಿದ್ದಾನೆ.

ಆಗ ಆರೋಪಿ ಬೈಕ್‌ಗೆ ಕಾರು ಟಚ್ ಮಾಡಿ ಎಸ್ಕೇಪ್ ಆಗುತ್ತಿದ್ದೀಯಾ? ಎಂದು ವಾಗ್ವಾದ ಆರಂಭಿಸಿದ್ದಾನೆ. ಅಷ್ಟರಲ್ಲೇ ಮತ್ತೆರಡು ಬೈಕ್‌ನಲ್ಲಿ ಬಂದ ನಾಲ್ವರು ಉದ್ಯಮಿ ಜತೆ ಜಗಳ ತೆಗೆದಿದ್ದಾರೆ. ಉದ್ಯಮಿ ರವಿಕಿರಣ್ ಜತೆ ಜಗಳವಾಡುತ್ತಲೇ ಮೂವರು ಕಾರು ಹತ್ತಿದ್ದಾರೆ. ಬಳಿಕ ಹಿಂಬದಿಯಿಂದ ರಿವಾಲ್ವರ್ ತೋರಿಸಿ, ತಾವು ಹೇಳಿದ ಕಡೆ ಕಾರು ಚಾಲನೆ ಮಾಡುವಂತೆ ಬೆದರಿಸಿದ್ದಾರೆ.

Accuse Saaksha Tv

ಜೆಎನ್‌ಎಂಸಿ ಕಾಲೇಜಿನಿಂದ ಖಾನಾಪುರ ಬಳಿ ಕೋಳಿ ಫಾರ್ಮ್‌ಗೆ ಕರೆದೊಯ್ದ ಆರೋಪಿಗಳು ಕೂಡಿಹಾಕಿದ್ದಾರೆ. ಮೊದಲು 20 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಆರೋಪಿಗಳು ಬಳಿಕ ರವಿಕಿರಣ್ ಬಳಿ ಇದ್ದ 55 ಸಾವಿರ ನಗದು, ಆ್ಯಪಲ್ ವಾಚ್, ಮೊಬೈಲ್, ಚಿನ್ನ ಹಾಗೂ ಬೆಳ್ಳಿಯ ನಾಣ್ಯ, 75 ಸಾವಿರ ಮೌಲ್ಯದ ಯುಎಸ್ ಕರೆನ್ಸಿ ಕಿತ್ತುಕೊಂಡಿದ್ದಾರೆ. ಬಳಿಕ ರವಿಕಿರಣ್ ಮೊಬೈಲ್‌ನಿಂದ ಪತ್ನಿಗೆ ಕರೆ ಮಾಡಿ 3 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾರೆ.

ಮಾರನೇ ದಿನ ಬೆಳಗ್ಗೆ ಅಪಹರಣಕಾರರಿಂದ ತಪ್ಪಿಸಿಕೊಂಡ ರವಿಕಿರಣ್ ದಾಂಡೇಲಿಗೆ ತೆರಳಿದ್ದಾರೆ. ಅಲ್ಲಿಂದ ತನ್ನ ಪತ್ನಿಗೆ ಕರೆ ಮಾಡಿ ಹುಬ್ಬಳ್ಳಿಯ ಮನೆಗೆ ಹೋಗಿದ್ದಾರೆ. ಮೂರು ದಿನಗಳ ಬಳಿಕ ಜನವರಿ 18ರಂದು ಬೆಳಗಾವಿ ಎಪಿಎಂಸಿ ಠಾಣೆಗೆ ಬಂದು ದೂರು ನೀಡಿದ್ದಾರೆ. ಕೇಸ್ ದಾಖಲಿಸಿಕೊಂಡು ತನಿಖೆಗಿಳಿದ ಎಪಿಎಂಸಿ ಠಾಣೆ ಪೊಲೀಸರು ಬೆಳಗಾವಿಯಲ್ಲಿ ಇಬ್ಬರು, ಖಾನಾಪುರದ ಓರ್ವ ಹಾಗೂ ಗೋವಾದಲ್ಲಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

Tags: #Saaksha TVBelagavibusinessmanCrimepolice
ShareTweetSendShare
Join us on:

Related Posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

by admin
March 4, 2026
0

ಜಾಮ್‌ನಗರ - ಪ್ರಧಾನಿ ನರೇಂದ್ರ ಮೋದಿ ಅವರು 'ವಂತಾರ'ವನ್ನು ಉದ್ಘಾಟಿಸಿ, ಒಂದು ವರ್ಷ ಕಳೆದಿದ್ದು ಈ ಒಂದು ವರ್ಷದಲ್ಲಿ ವನ್ಯಜೀವಿ ರಕ್ಷಣೆ, ಸುಧಾರಿತ ವೈದ್ಯಕೀಯ ಆರೈಕೆ ಮತ್ತು...

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram