ಬೆಂಗಳೂರು: ಇಲ್ಲಿಯ ಬಸವನಗುಡಿಯ ಬಿಐಟಿ ಕಾಲೇಜಿಗೆ ಬಾಂಬ್ ಬೆದರಿಕೆ (Bomb Threat) ಹಾಕಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಂಗಳೂರಿನ ವಿವಿ ಪುರಂ ಪೊಲೀಸರು (Bengaluru VV Puram Police) ಪಶ್ಚಿಮ ಬಂಗಾಳದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಅಕ್ಟೋಬರ್ 4ರಂದು ಬಸವನಗುಡಿಯ ಬಿಐಟಿ ಕಾಲೇಜಿಗೆ ಇ-ಮೇಲ್ ಮೂಲಕ ಆರೋಪಿಯು ಬಾಂಬ್ ಬೆದರಿಕೆ ಹಾಕಿದ್ದ. ಕಾಲೇಜು ಆವರಣದಲ್ಲೇ ಹೈಡ್ರೋಜನ್ ಸುಧಾರಿತ ಐಇಡಿ (IED) ಇಟ್ಟಿದ್ದು, ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ.
ಈ ಕುರಿತು ಪ್ರಕರಣ ದಾಖಲಾಗಿತ್ತು. ಹೀಗಾಗಿ ಪೊಲೀಸರು ತನಿಖೆ ನಡೆಸಿದ್ದರು. ಸದ್ಯ ಆರೋಪಿಯನ್ನು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ನಲ್ಲಿ ಬಂಧಿಸಲಾಗಿದೆ. ಆರೋಪಿಯಿಂದ ಲ್ಯಾಪ್ಟಾಪ್, ಮೊಬೈಲ್ ಫೋನ್ಗಳನ್ನ ವಶಕ್ಕೆ ಪಡೆಯಲಾಗಿದೆ. ಇನ್ನೂ ವಿಚಾರಣೆ ವೇಳೆ ಆರೋಪಿಯು ಇದೇ ರೀತಿ 10 ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದು ಬಂದಿದೆ.