ಬೆಂಗಳೂರು : ಮತದಾರರಿಗೆ ಗಿಫ್ಟ್ ಬಾಕ್ಸ್ (Gift Box) ಹಂಚಿ ಆಮಿಷವೊಡ್ಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ರಾಜ ರಾಜೇಶ್ವರಿ ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ (Kusuma Hanumantharayappa) ಹಾಗೂ ಸಂಸದ ಡಿ.ಕೆ ಸುರೇಶ್ (DK Suresh) ವಿರುದ್ಧ ಎಫ್ಐಆರ್ ದಾಖಲಾಗಿದೆ.
ಆರ್ ಆರ್ ನಗರದ ಬಿಬಿಎಂಪಿ (BBMP) ಕಚೇರಿ ಹತ್ತಿರ ಮತದಾರರಿಗೆ ತವಾ ಬಾಕ್ಸ್ ಹಂಚಿಕೆ ಮಾಡುತ್ತಿದ್ದ ಕುರಿತು ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಸುರೇಶ್ ಸ್ಥಳಕ್ಕೆ ತೆರಳಿದಾಗ, ತವಾ ಹಂಚುತ್ತಿದ್ದವರಲ್ಲಿ ಇಬ್ಬರು ಓಡಿ ಹೋಗಿದ್ದಾರೆ. ಈ ಪೈಕಿ ಓರ್ವ ಸಿಕ್ಕಿ ಬಿದ್ದಿದ್ದಾನೆ. ಗಿಫ್ಟ್ ಬಾಕ್ಸ್ಗಳ ಮೇಲೆ ಕುಸುಮಾ ಹಾಗೂ ಡಿ.ಕೆ ಸುರೇಶ್ ಭಾವಚಿತ್ರಗಳಿದ್ದು, ಅವುಗಳನ್ನು ಸೀಜ್ ಮಾಡಲಾಗಿದೆ. ಈ ಕುರಿತು ಆರ್ ಆರ್ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಕುಸುಮಾ ಅವರಿಗೆ ಮೊದಲ ಪಟ್ಟಿಯಲ್ಲಿಯೇ ಟಿಕೆಟ್ ಘೋಷಣೆಯಾಗಿದೆ. ಹೀಗಾಗಿ ಈಗಿನಿಂದಲೇ ಮತದಾರನ್ನು ಓಲೈಕೆ ಮಾಡಿಕೊಳ್ಳುವ ಕಾರ್ಯವನ್ನು ಅವರು ಮಾಡುತ್ತಿದ್ದಾರೆ.