ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು (Anticipatory Bail) ಅರ್ಜಿ ವಜಾಗೊಂಡಿದೆ.
ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಗಜಾನನ ಭಟ್ ವಜಾಗೊಳಿಸಿದ್ದಾರೆ.
ಹಿಂದೆ ಅತ್ಯಾಚಾರ ಪ್ರಕರಣಕ್ಕೆ (Rape Case) ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆ ಸಂದರ್ಭದಲ್ಲಿಯೂ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು. ಈಗ ಮತ್ತೊಮ್ಮೆ ವಜಾಗೊಳಿಸಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಿದ್ದು, ಪ್ರಜ್ವಲ್ ರೇವಣ್ಣ ಅತ್ಯಾಚಾರ ನಡೆಸಿರುವುದು ಸತ್ಯ ಎಂದು ಉಲ್ಲೇಖಿಸಲಾಗಿದೆ.