ಚಿತ್ರದುರ್ಗ: ವಿದ್ಯಾರ್ಥಿನಿ ಮೇಲೆ ಆಸಿಡ್ ಎರಚಿದ ಆರೋಪದ ಹಿನ್ನೆಲೆಯಲ್ಲಿ ಶಾಲೆಯ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.
ಜೋಡಿಚಿಕ್ಕೇನಹಳ್ಳಿಯ ಸರ್ಕಾರಿ ಪ್ರಾಥಾಮಿಕ ಶಾಲೆಯಲ್ಲಿ ಅ.25 ರಂದು ಶಾಲಾ ಶೌಚಾಲಯ ಸ್ವಚ್ಛಗೊಳಿಸಲು ವಿದ್ಯಾರ್ಥಿಗಳನ್ನೇ ಬಳಕೆ ಮಾಡಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ 2ನೇ ತರಗತಿ ವಿದ್ಯಾರ್ಥಿನಿ ಒಬ್ಬಳ ಮೇಲೆ ಮುಖ್ಯಶಿಕ್ಷಕ ರಂಗಸ್ವಾಮಿ ಆಸಿಡ್ ಎರಚಿದ್ದಾರೆ ಎಂದು ಪೋಷಕರು ಆರೋಪ ಮಾಡಿದ್ದಾರೆ. ಸದ್ಯ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಡಿಡಿಪಿಐ ರವಿಶಂಕರ್ ರೆಡ್ಡಿಯವರು ಮುಖ್ಯಶಿಕ್ಷಕನನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಮುಖ್ಯಶಿಕ್ಷಕ ರಂಗಸ್ವಾಮಿ ವಿರುದ್ಧ ಗ್ರಾಮಾಂತರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.