ಮಹಿಳೆಯೊಬ್ಬಳು ಪೊಲೀಸರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ, ಸೆಲ್ಫಿ ವೀಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚನ್ನಪಟ್ಟಣದ (Channapatna) ಕೋಟೆ ಬಡಾವಣೆಯಲ್ಲಿ ನಡೆದಿದೆ.
ಮಾಧುರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎನ್ನಲಾಗಿದೆ. ನಿದ್ರೆ ಮಾತ್ರೆ ಸೇವಿಸಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ವೀಡಿಯೋದಲ್ಲಿ ಚನ್ನಪಟ್ಟಣ ಟೌನ್ ಪೊಲೀಸರ ವಿರುದ್ಧ ಕಿರುಕುಳ ಆರೋಪ ಮಾಡಿದ್ದಾಳೆ.
ಗಲಾಟೆ ವಿಚಾರವಾಗಿ ದೂರು ನೀಡಲು ಪೊಲೀಸ್ ಠಾಣೆಗೆ ಮಹಿಳೆ ತೆರಳಿದ್ದಾಗ ಪೊಲೀಸರು ಅವಮಾನ ಮಾಡಿದ್ದಾರೆ. ನಿನ್ನ ಮೇಲೆಯೇ ಹಲವು ಕೇಸ್ಗಳಿವೆ ಎಂದು ಮೊಬೈಲ್ ಕಿತ್ತುಕೊಂಡು ಕಳುಹಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ನಂತರ ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದ ಮಹಿಳೆಯನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಹಿಳೆ ಸಾವನ್ಮಪ್ಪಿದ್ದಾಳೆ. ಈ ಸಂಬಂಧ ಚನ್ನಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.