ಇತ್ತೀಚೆಗಷ್ಟೇ ಗೋಕಳ್ಳರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಲಾಗಿತ್ತು. ವಾಟ್ಸಾಪ್ ನಲ್ಲಿ ತುಳು ಭಾಷೆಯಲ್ಲಿ ವ್ಯಕ್ತಿಯೋರ್ವ ಸಿಂಧೂ ಬಿ ರೂಪೇಶ್ ಅವರಿಗೆ ನೇರವಾಗಿ ಕೊಲೆ ಬೆದರಿಕೆಯೊಡ್ಡಿದ್ದ. ಇದೀಗ ಆ ವ್ಯಕ್ತಿ ಪೊಲೀಸರ ಅತಿಥಿಯಾಗಿದ್ದಾನೆ. ಲಾಧಿಕಾರಿಗೆ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಮೂಡುಬಿದಿರೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು,ಆರೋಪಿಗಾಗಿ ಬಲೆ ಬೀಸಿದ್ರು. ಇದೀಗ ಬಜ್ಪೆ ಸಮೀಪದ ನಿವಾಸಿ ರಂಜಿತ್ ಎಂಬಾತನನ್ನು ಬಂಧಿಸಿದ್ದಾರೆ. ಜಾನುವಾರು ಸಾಗಾಟಗಾರರ ಮೇಲೆ ನಡೆಸಲಾಗುತ್ತಿರುವ ಹಲ್ಲೆಗಳನ್ನು ಉಲ್ಲೇಖಿಸಿ ಕಾನೂನು ಕ್ರಮದ ಎಚ್ಚರಿಕೆಯನ್ನು ನೀಡಿದ್ದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಜಿಲ್ಲಾಧಿಕಾರಿಗಳಿಗೆ ಕೊಲೆ ಬೆದರಿಕೆ ಹಾಕಲಾಗಿದ್ದ ಸುದ್ದಿ ಎಲ್ಲೆಡೆ ವೈರಲ್ ಆಗಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು.
ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಕಿಚ್ಚು ರಾಜ್ಯ ರಾಜಕಾರಣದಲ್ಲಿ ಇನ್ನೂ ಆರಿಲ್ಲ. ಇದರ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ಎರಡನೇ...








