Acharya-dharmendra | ರಾಮಮಂದಿರ ಹೋರಾಟಗಾರ ಆಚಾರ್ಯ ಧರ್ಮೆಂದ್ರ ಇನ್ನಿಲ್ಲ
ಜೈಪುರ : ರಾಮಮಂದಿರ ಹೋರಾಟದಲ್ಲಿ ಸಕ್ರಿಯರಾಗಿದ್ದ ಆಚಾರ್ಯ ಧರ್ಮೇಂದ್ರ ಅವರು ಇಂದು ಕೊನೆಯುಸಿರೆಳೆದಿದ್ದಾರೆ.
80 ವರ್ಷದ ಆಚಾರ್ಯ ಧರ್ಮೇಂದ್ರ ಅವರು ಕರುಳಿನ ಕಾಯಿಲೆಯಿಂದ ಬಳಲುತ್ತಿದ್ದರು.
ಹೀಗಾಗಿ ಅವರನ್ನು ಜೈಪುರದ ಸವಾಯಿ ಮಾನ್ ಸಿಂಗ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.
ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಆವೇಶಭರಿತ ಭಾಷಣಗಳಿಗೆ ಹೆಸರಾಗಿದ್ದ ಧರ್ಮೇಂದ್ರ ಅವರು, ಗೋವುಗಳ ರಕ್ಷಣೆಗಾಗಿ 52 ದಿನಗಳ ಕಾಲ ಉಪವಾಸ ಮಾಡಿದ್ದರು.
ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಆರೋಪಿಗಳೆಂದು ಪರಿಗಣಿಸಲಾಗಿತ್ತು.
ಧರ್ಮೇಂದ್ರ ಅವರ ನಿಧನಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂತಾಪ ಸೂಚಿಸಿದ್ದಾರೆ.
ಅಲ್ಲದೆ ಆರ್ ಎಸ್ ಎಸ್ ಮುಖಂಡರು ಕೂಡ ಸಂತಾಪ ಸೂಚಿಸಿದ್ದಾರೆ. acharya-dharmendra-is-no-more