Acharya | ಆಚಾರ್ಯಗೆ ಸೂಪರ್ ಸ್ಟಾರ್ ಸಾಥ್…!
ಮೆಗಾಸ್ಟಾರ್ ಚಿರಂಜೀವಿ, ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಒಟ್ಟಿಗೆ ನಟಿಸಿರುವ ಆಚಾರ್ಯ ಸಿನಿಮಾ ಇದೇ ಏಪ್ರಿಲ್ 29 ರಂದು ವಿಶ್ವದಾದ್ಯಂತ ರಿಲೀಸ್ ಆಗಲಿದೆ.
ಕೊರಟಾಲ ಶಿವ ನಿರ್ದೇಶನದ ಈ ಸಿನಿಮಾದ ಪ್ರಿ ರಿಲೀಸ್ ಇವೆಂಟ್ ಭರ್ಜರಿಯಾಗಿ ನಡೆಯುತ್ತಿದೆ.
ಈ ಸಿನಿಮಾದಲ್ಲಿ ರಾಮ್ ಚರಣ್ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.
ಆಚಾರ್ಯಕ್ಕೆ ಸೂಪರ್ ಸ್ಟಾರ್ ಸಾಥ್…!

ಮುಖ್ಯವಾಗಿ ಈ ಸಿನಿಮಾದಲ್ಲಿ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಧ್ವನಿ ಇರಲಿದೆಯಂತೆ.
ಇದು ಮೆಗಾ ಸೂಪರ್ ಸ್ಟಾರ್ ಅಭಿಮಾನಿಗಳಿಗೆ ಕಿಕ್ ಕೊಟ್ಟಿದೆ.
ಈ ಹಿಂದೆ ಸರಿಲೇರು ನೀಕೆವ್ವರು ಸಿನಿಮಾದ ಪ್ರಿ ರಿಲೀಸ್ ಕಾರ್ಯಕ್ರಮಕ್ಕೆ ಮೆಗಾಸ್ಟಾರ್ ಚಿರಂಜೀವಿ ಮುಖ್ಯ ಅಥಿತಿಯಾಗಿ ಭಾಗವಹಿಸಿದ್ದರು.
ಇದರ ಮುಂದುವರೆದ ಭಾಗವಾಗಿ ಆಚಾರ್ಯ ಸಿನಿಮಾದ ಪ್ರಿ ರಿಲೀಸ್ ಕಾರ್ಯಕ್ರಮದಲ್ಲಿ ದಿಗ್ಗಜರ ಸಮ್ಮಿಲನವಾಗಲಿದೆ..
ಪವರ್ ಸ್ಟಾರ್ ಪವನ್ ಕಲ್ಯಾಣ್, ಸೂಪರ್ ಸ್ಟಾರ್ ಮಹೇಶ್ ಬಾಬು, ನಿರ್ದೇಶಕ ಎಸ್ ಎಸ್ ರಾಜಮೌಳಿ, ತ್ರಿವಿಕ್ರಮ್ ಸೇರಿದಂತೆ ಹಲವು ದಿಗ್ಗಜರು ಆಚಾರ್ಯ ಸಿನಿಮಾದ ಪ್ರಿ ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. acharya-film chiranjeevi ramcharan mahesh babu