ಆಸಿಡ್ ದಾಳಿಗೆ ಒಳಗಾದ ಯುವತಿಯ ಆರೋಗ್ಯದಲ್ಲಿ ಚೇತರಿಕೆ
ಬೆಂಗಳೂರು: ಏಪ್ರಿಲ್ 28 ರಂದು ಸುಂಕದಕಟ್ಟೆಯಲ್ಲಿ ಆಸಿಡ್ ದಾಳಿಗೆ ಒಳಗಾದ ಯುವತಿ ಚೇತರಿಸಿಕೊಳ್ಳುತ್ತಿದ್ದು, ಸೇಂಟ್ ಜಾನ್ಸ್ ಆಸ್ಪತ್ರೆಯ ಐಸಿಯುನಲ್ಲಿ ಸಂತ್ರಸ್ತೆಗೆ ಚಿಕಿತ್ಸೆ ಮುಂದುವರೆದಿದೆ.
ಸೇಂಟ್ ಜಾನ್ಸ್ ಆಸ್ಪತ್ರೆಗೆ ಭೇಟಿ ನೀಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಕೆ ಸುಧಾಕರ್ ಸಂತ್ರಸ್ತೆಯ ಆರೋಗ್ಯದಲ್ಲಿ ಸುಧಾರಣೆಯಾದ ಬಳಿಕ ಆಕೆಗೆ ಸರ್ಕಾರಿ ಉದ್ಯೋಗ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿಗಳ ಜೊತೆ ಚರ್ಚಿಸುತ್ತೇನೆ.ಹಾಗೇ ಆಕೆಯ ಕುಟುಂಬ ಕಷ್ಟದಲ್ಲಿದ್ದು, ಚಿಕಿತ್ಸೆ ಕೊಡಿಸುವ ಹಂತದಲ್ಲಿ ವೈಯಕ್ತಿಕವಾಗಿ ನಾನು 5 ಲಕ್ಷ ರೂಪಾಯಿ ಪರಿಹಾರ ನೀಡುತ್ತೇನೆ ಎಂದು ಹೇಳಿದರು.
ಇನ್ನೂ ಆ್ಯಸಿಡ್ ದಾಳಿಗೊಳಗಾದ ಯುವತಿ ದೇಹ ಶೇ.35 ರಿಂದ 40ರಷ್ಟು ಸುಟ್ಟು ಹೋಗಿದೆ. ಪರಿಸ್ಥಿತಿ ಸ್ವಲ್ಪ ಕ್ಲಿಷ್ಟಕರವಾಗಿದೆ. ಆದರೂ ವೈದ್ಯರು ಆಕೆ ಚೇತರಿಸಿಕೊಳ್ಳುವ ಭರವಸೆ ನೀಡಿದ್ದಾರೆ. ಒಂದು ವಾರದ ನಂತರ ಅವರಲ್ಲಿ ಆಗುವ ಚೇತರಿಕೆಯ ಬಗ್ಗೆ ಗೊತ್ತಾಗುತ್ತದೆ. ಪೂರ್ಣ ಪ್ರಮಾಣದ ಚೇತರಿಕೆ ಕಾಣಲು ಎರಡು ತಿಂಗಳು ಕಾಲಾವಕಾಶ ಬೇಕಾಗುತ್ತದೆ ಎಂದರು.
ಹಾಗೇ ದಾಳಿ ನಡೆದು 72 ಘಂಟೆ ಕಳೆದರು ಆರೋಪಿ ನಾಗೇಶ್ ಗಾಗಿ ಪೊಲೀಸರು ಇನ್ನೂ ತಲಾಶ್ ನಡೆಸುತ್ತಿದ್ದಾರೆ. ಆರೋಪಿಗಾಗಿ ತೀರ್ವ ಹುಡುಕಾಟದಲ್ಲಿರುವ ಪೊಲೀಸರು ಮೊದಲು ಮೂರು ತಂಡದಿಂದ ಹುಡುಕಾಟ ನಡೆಸಲಾಗುತ್ತಿತ್ತು. ನಂತರ ದು ತಂಡಗಳಾಗಿ ಮಾಡಿಕೊಳ್ಳಾಗಿತ್ತು. ಸದ್ಯಕ್ಕೆ 7 ತಂಡದಿಂದ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ.