ಗನ್ ಹಿಡಿದು ‘ದುರಂಧರ್’ ಚಿತ್ರದ ಶೈಲಿಯಲ್ಲಿ ನೃತ್ಯ ಮಾಡಿದ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಹಿನ್ನೆಲೆಯಲ್ಲಿ ವಿಷಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವರು, ಯಾರೇ ಆಗಲಿ, ಕಾನೂನಿಗೆ ವಿರುದ್ಧವಾದ ಚಟುವಟಿಕೆ ಮಾಡಿದರೆ ಕ್ರಮ ಕೈಗೊಳ್ಳುತ್ತೇವೆ. ಅವರು ಯಾವ ಪಕ್ಷದವರು ಅನ್ನೋದು ನಂತರದ ವಿಚಾರ. ಮೊದಲು ಕಾನೂನು ಮುಖ್ಯ ಎಂದು ಸ್ಪಷ್ಟಪಡಿಸಿದ್ದಾರೆ.
ಕಾನೂನಿನಲ್ಲಿ ಏನೆಲ್ಲಾ ಕ್ರಮಗಳಿವೆಯೋ, ಅದರ ಪ್ರಕಾರ ಪೊಲೀಸರು ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ. ಶಸ್ತ್ರಾಸ್ತ್ರಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸುವುದು ಅಥವಾ ದುರುಪಯೋಗ ಮಾಡುವಂತಹ ಘಟನೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತದೆ ಎಂಬ ಸಂದೇಶ ನೀಡಿದ್ದಾರೆ.
ಒಟ್ಟಾರೆ, ಈ ಪ್ರಕರಣದಲ್ಲಿ ರಾಜಕೀಯ ಹಿನ್ನೆಲೆ ಇದ್ದರೂ ಕಾನೂನಿನ ಮುಂದೆ ಎಲ್ಲರೂ ಸಮಾನ ಎಂಬ ನಿಲುವನ್ನು ಗೃಹ ಸಚಿವರು ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಪೊಲೀಸ್ ತನಿಖೆಯ ಬಳಿಕ ಏನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದರ ಮೇಲೆ ಗಮನ ಕೇಂದ್ರೀಕೃತವಾಗಿದೆ.







