ಬಳ್ಳಾರಿ: ಪಕ್ಷದ ವಿರುದ್ಧ ಮಾತನಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಶಾಸಕ ಎಸ್.ಟಿ. ಸೋಮಶೇಖರ್ (ST Somashekar) ರಾಜೀನಾಮೆ ನೀಡಲಿ ಎಂದು ಮಾಜಿ ಸಂಸದ ಮುನಿಸ್ವಾಮಿ (Muniswamy) ಆಗ್ರಹಿಸಿದ್ದಾರೆ.
ಬಿಜೆಪಿಯಲ್ಲಿ (BJP) ಇದ್ದುಕೊಂಡು ಪಕ್ಷದ ವಿರುದ್ಧವೇ ಮಾತನಾಡುತ್ತಿರುವುದರಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತಿದ್ದು ಕೂಡಲೇ ಕೂಡಲೇ ಅಂತವರ ಮೇಲೆ ಹೈಕಮಾಂಡ್ (High Command) ಕ್ರಮ ಕೈಗೊಳ್ಳಬೇಕು ಎಂದು ಮುನಿಸ್ವಾಮಿ ಆಗ್ರಹಿಸಿದ್ದಾರೆ.
ಏನೋ ಮಾತನಾಡಿದರೆ ಏನೋ ಆಗುತ್ತೇನೆ ಎಂದು ಯತ್ನಾಳ್ ತಿಳಿದಿದ್ದಾರೆ. ಯತ್ನಾಳ್ ಭ್ರಮನಿಸರಾಗಿದ್ದು ಅವರ ಹೇಳಿಕೆಯನ್ನು ಪಕ್ಷದ ಕಾರ್ಯಕರ್ತರು ಸಹಿಸುವುದಿಲ್ಲ. ಯತ್ನಾಳ್ ಸೇರಿ ಅಂತವರ ಮೇಲೆ ಕೂಡಲೇ ಕ್ರಮ ಕೈಗೊಳ್ಳಬೇಕು. ಎಸ್ಟಿ ಸೋಮಶೇಖರ್ ರಾಜೀನಾಮೆ ನೀಡಬೇಕು ಎಂದು ಎಂದು ಆಗ್ರಹಿಸಿದ್ದಾರೆ.