ನವದೆಹಲಿ: ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಹೈದರಾಬಾದ್ ಕಾಲ್ತುಳಿತದ ಸಂದರ್ಭದಲ್ಲಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿಂತೆ ಚಿಕ್ಕಡಪಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಡಿಸೆಂಬರ್ 4 ರಂದು ನಡೆದ ʻಪುಷ್ಪ 2: ದಿ ರೂಲ್ʼನ ಪ್ರೀಮಿಯರ್ ಶೋ ಸಂದರ್ಭದಲ್ಲಿ ಹೈದರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ ಕಾಲ್ತುಳಿತ ಸಂಭವಿಸಿತ್ತು. ಈ ವೇಳೆ ರೇವತಿ (39) ಎಂಬ ಮಹಿಳೆ ಸಾವನ್ನಪ್ಪಿದ್ದರು. ಅಲ್ಲದೇ, ಅವರ 9 ವರ್ಷಧ ಮಗ ಗಂಭೀರವಾಗಿ ಗಾಯಗೊಂಡಿದ್ದಾನೆ. ಹೀಗಾಗಿ ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಆರೋಪಿಯಾಗಿಸಲಾಗಿದೆ.
ಈ ಪ್ರಕರಣ ವಜಾಗೊಳಿಸುವಂತೆ ನಟ ಈಗಾಗಲೇ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಅದರ ವಿಚಾರಣೆ ಇನ್ನೂ ಆರಂಭವಾಗಿಲ್ಲ. ಈ ಮಧ್ಯೆ ಪೊಲೀಸರು ಮನೆಗೆ ತೆರಳಿ ವಶಕ್ಕೆ ಪಡೆದಿದ್ದಾರೆ.