ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) ತನಿಖೆಯನ್ನು ಪೊಲೀಸರು ಇನ್ನೂ ನಡೆಸುತ್ತಿದ್ದು, ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಈ ಮಧ್ಯೆ ನಟ ಚಿಕ್ಕಣ್ಣಗೂ ಸಂಕಷ್ಟ ಎದುರಾದಂತಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬರುವುದು ಮಾತ್ರ ಈಗ ಬಾಕಿ ಇದೆ. ಈ ವರದಿ ಬರುತ್ತಿದ್ದಂತೆ ಶೀಘ್ರವೇ ಕೋರ್ಟ್‌ಗೆ ಆರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ (Bengaluru Police Commissioner) ಬಿ. ದಯಾನಂದ್ ಹೇಳಿದ್ದಾರೆ.
ಈಗ ನಟ ದರ್ಶನ್ (Darshan) ಭೇಟಿಯಾಗಿದ್ದ ನಟ ಚಿಕ್ಕಣ್ಣಗೆ ಸಂಕಷ್ಟ ಎದುರಾದ್ದಂತೆ ಕಾಣ್ತಿದೆ. ಕೋರ್ಟ್‌ನಲ್ಲಿ ಸಿಆರ್‌ಪಿಸಿ 164 ಅಡಿ ಹೇಳಿಕೆ ನೀಡಿದ್ದ ನಟ ಚಿಕ್ಕಣ್ಣ, ನಂತರ ಜೈಲಿಗೆ ತೆರಳಿ ದರ್ಶನ್ ಜೊತೆ ಮಾತುಕತೆ ನಡೆಸಿದ್ದನ್ನು ಪೊಲೀಸರು ಗಂಭೀರವಾಗಿ ತೆಗೆದುಕೊಂಡಿದ್ದಾರೆ.
ಚಿಕ್ಕಣ್ಣಗೆ ಮತ್ತೊಮ್ಮೆ ನೊಟೀಸ್ ನೀಡಿ ವಿಚಾರಣೆಗೆ ಒಳಪಡಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಕಾನೂನಿನ್ವಯ ಕ್ರಮ ತೆಗೆದುಕೊಳ್ಳಲಾಗುತ್ತೆ ಎಂದು ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ.








