ಬೆಂಗಳೂರು, ಜೂನ್ 7 : ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ಮರಣದ ಸುದ್ದಿ ತಿಳಿದು ಮುಖ್ಯಮಂತ್ರಿ ಬಿ.ಎಸ್ಯಡಿಯೂರಪ್ಪ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಚಿರಂಜೀವಿ ಸರ್ಜಾ ಅವರು 39ನೇ ವರ್ಷಕ್ಕೆ ಅಕಾಲಿಕ ಮರಣ ಹೊಂದಿರೋದು ದಿಗ್ಬ್ರಮೆ ಮೂಡಿಸಿದೆ ಎಂದಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಕನ್ನಡದ ಖ್ಯಾತ ಕಲಾವಿದ, ಶ್ರೀ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಕೇವಲ 39 ವರ್ಷದ ವಯಸ್ಸಿನಲ್ಲಿ ಅಕಾಲಿಕವಾಗಿ ವಿಧಿವಶರಾಗಿರುವುದು ದಿಗ್ಭ್ರಮೆ ಮೂಡಿಸಿದೆ. ದೇವರು ಅವರಿಗೆ ಸದ್ಗತಿಯನ್ನು, ಅವರ ಕುಟುಂಬ, ಅಪಾರ ಅಭಿಮಾನಿ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕಂಬನಿ ಮಿಡಿದಿದ್ದಾರೆ.
ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್
ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...








