ಬೆಂಗಳೂರು: ಕಳೆದ ಒಂದೂವರೆ ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್ ಡಿಸ್ಚಾರ್ಜ್ ಆಗಿದ್ದಾರೆ.
ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ದರ್ಶನ್ ಅವರು ಈಗ ಕೋರ್ಟ್‌ಗೆ ತೆರಳುತ್ತಿದ್ದಾರೆ. ದರ್ಶನ್ ಗೆ ವೈದ್ಯಕೀಯ ಚಿಕಿತ್ಸೆಯ ಹಿನ್ನೆಲೆಯಲ್ಲಿ 6 ವಾರಗಳ ಮಧ್ಯಂತರ ಜಾಮೀನು ಸಿಕ್ಕಿತ್ತು. ಹೈಕೋರ್ಟ್ ವಿಚಾರಣೆಯ ಸಂದರ್ಭದಲ್ಲಿ ದರ್ಶನ್ ಪರ ವಕೀಲರು ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ. ಇಲ್ಲವಾದರೆ, ದರ್ಶನ್ ಗೆ ಪಾರ್ಶ್ವವಾಯು ಆಗಬಹುದು ಎಂದಿದ್ದರು. ನಂತರ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿತ್ತು.
ಈ ಮಧ್ಯ ಶುಕ್ರವಾರ ದರ್ಶನ್ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈಗ ಜಾಮೀನಿಗೆ ಸಂಬಂಧಿಸಿದಂತೆ ಕೆಲ ಪ್ರಕ್ರಿಯೆಗಳನ್ನು ನಡೆಸಬೇಕಾದ ಕಾರಣ ದರ್ಶನ್ ಕೋರ್ಟ್‌ನತ್ತ ತೆರಳುತ್ತಿದ್ದಾರೆ. ನ್ಯಾಯಾಲಯಕ್ಕೆ ತೆರಳಿದ ಬಳಿಕ ಮನೆಗೆ ತೆರಳುತ್ತಾರಾ? ಅಥವಾ ಮರಳಿ ಆಸ್ಪತ್ರೆಗೆ ಹೋಗುತ್ತಾರಾ ಎಂಬುವುದು ಮಾತ್ರ ಗೊತ್ತಾಗಿಲ್ಲ.








