ರಾಯಚೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Darshan) ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದು, ಅವರ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ದರ್ಶನ್ ಈ ಪ್ರಕರಣದಿಂದ ಪಾರಾಗಿ ಆದಷ್ಟು ಬೇಗ ಜೈಲಿನಿಂದ ಹೊರ ಬರಲಿ ಎಂದು ರಾಯಚೂರಿನ ಸಿಂಧನೂರು ತಾಲ್ಲೂಕಿನ ಚಿರತನಾಳ ಗ್ರಾಮದಲ್ಲಿ ದರ್ಶನ್ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಗ್ರಾಮದಲ್ಲಿನ ಶರಣ ಬಸವೇಶ್ವರ ದೇವಸ್ಥಾನದಲ್ಲಿ ಗುರುವಾರ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬೆಂಗಳೂರಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರವಾದ ಹಿನ್ನೆಲೆಯಲ್ಲಿ ಶರಣಬಸವೇಶ್ವರ ದೇವರ ಮೂರ್ತಿ ಪಕ್ಕ ದರ್ಶನ್ ಫೋಟೋ ಇಟ್ಟು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ದರ್ಶನ್ ಪ್ರಕರಣದಿಂದ ಹೊರ ಬಂದು ಮೊದಲಿನಂತೆ ನಟಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಅಲ್ಲದೇ, ಪೂಜೆಯ ನಂತರ ಅನ್ನ ಸಂತರ್ಪಣೆ ಮಾಡಿದ್ದಾರೆ.