ನಟ ದರ್ಶನ್ (Darshan) ಕೊಲೆ ಆರೋಪದಲ್ಲಿ ಜೈಲು ಸೇರಿದ್ದರು. ಈಗ ಬೇಲ್ ಮೇಲೆ ಹೊರ ಬಂದಿದ್ದು, ಮತ್ತೆ ಸಹಜ ಜೀವನದತ್ತ ಮರಳಿದ್ದಾರೆ. ಈಗ ಕುಟುಂಬಸ್ಥರೊಂದಿಗೆ ಕಾಲ ಕಳೆಯುತ್ತಿರುವ ದಚ್ಚು, ಕುಟುಂಬಸ್ಥರ ಜೊತೆ ಟೆಂಪಲ್ ರನ್ ನಡೆಸಿದ್ದಾರೆ.
ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಂಕ್ರಾಂತಿ ಹಬ್ಬದ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮಿ ಹಾಗೂ ಸ್ನೇಹಿತರ ಜೊತೆ ಚಾಮುಂಡಿ ಬೆಟ್ಟಕ್ಕೆ ದರ್ಶನ್ ಭೇಟಿ ನೀಡಿ, ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದರ್ಶನ್ ಆಗಮಿಸಿದ ಸುದ್ದಿ ಕೇಳಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು,.
ಪ್ರತಿ ವರ್ಷವೂ ದರ್ಶನ್ ಜ.14ರಂದು ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ. ಅದರಂತೆ ಈ ವರ್ಷವೂ ಹಬ್ಬ ಆಚರಿಸಿದ್ದಾರೆ. ಫಾರಂ ಹೌಸ್‌ನಲ್ಲಿ ಸಹೋದರ ದಿನಕರ್, ಪತ್ನಿ ವಿಜಯಲಕ್ಷ್ಮಿ ಮತ್ತು ಪುತ್ರ ವಿನೀಶ್ ಜೊತೆ ನಟ ಹಬ್ಬ ಆಚರಿಸಿದ್ದಾರೆ.