ಚಂದನವನದ ನಟ ಧ್ರುವ ಸರ್ಜಾ ಹಾಗೂ ಅವರ ಮಾರ್ಟಿನ್ ಚಿತ್ರದ ತಂಡ ವಿಮಾನ ದುರಂತದಿಂದ ಪಾರಾಗಿದ್ದಾರೆ.
ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಈ ವಿಷಯ ತಿಳಿಸಿದೆ. ಮಾರ್ಟಿನ್ ಸಿನಿಮಾದ ಹಾಡಿನ ಚಿತ್ರೀಕರಣಕ್ಕಾಗಿ ಚಿತ್ರತಂಡದ ಜೊತೆ ಧ್ರುವ ಸರ್ಜಾ ಅವರು ಶ್ರೀನಗರಕ್ಕೆ ತೆರಳಿದ್ದರು. ಶೂಟಿಂಗ್ ಮುಗಿಸಿ ನಂತರ ದೆಹಲಿಗೆ ಮರಳುವಾಗಿ ವಿಮಾನದಲ್ಲಿ ತೊಂದರೆ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿನ ವಿಡಿಯೋವನ್ನು ದ್ರುವ ಸರ್ಜಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಆದರೆ, ಪೈಲಟ್ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದಂತಾಗಿದೆ. ಕ್ರ್ಯಾಶ್ ಆಗಬೇಕಿದ್ದ ಫ್ಲೈಟ್ ಕೂದಲೆಳೆ ಅಂತರದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಇಂಡಿಗೋ ವಿಮಾನದಲ್ಲಿ ‘ಮಾರ್ಟಿನ್’ ಚಿತ್ರತಂಡ ವಿಡಿಯೋ ಮಾಡಿದೆ. ಈ ರೀತಿ ಇಷ್ಟು ಕೆಟ್ಟ ಅನುಭವ ಇಡೀ ಜೀವನದಲ್ಲೇ ಆಗಿರಲಿಲ್ಲ. ಈಗ ನಾವು ಸೇಫ್ ಆಗಿದ್ದೇವೆ. ಜೈ ಆಂಜನೇಯ. ಪೈಲಟ್ಗೆ ಧನ್ಯವಾದ’ ಎಂದು ಧ್ರುವ ಸರ್ಜಾ ತಿಳಿಸಿದ್ದಾರೆ.
ಮೊದಲ ಬಾರಿ ಸಾವನ್ನು ಹತ್ತಿರದಿಂದ ನೋಡಿ ವಾಪಸ್ ಬಂದಿದ್ದೇನೆ. ಚಿರು, ತಂದೆ-ತಾಯಿ ಹಾಗೂ ಅಭಿಮಾನಿಗಳು ಆಶೀರ್ವಾದದಿಂದ ಪಾರಾಗಿದ್ದೇನೆ. ಫ್ಲೈಟ್ನಲ್ಲಿ ಇದ್ದ ಎಲ್ಲರೂ ಜೀವ ಉಳಿಸಿಕೊಳ್ಳಲು ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು. ನಾವು ಸೇಫ್ ಆಗಿ ಲ್ಯಾಂಡ್ ಆದಾಗ ಜನರು ಖುಷಿಯಿಂದ ಕೂಗಾಡಿದರು. ತಮ್ಮ ಪ್ರೀತಿಪಾತ್ರರಿಗೆ ಕರೆ ಮಾಡಿದರು. ಆನಂದ ಭಾಷ್ಪ ಸುರಿಸಿದರು. ಚೆನ್ನಾಗಿ ಬದುಕಲು ನಮಗೆ ಈ ಮರುಜನ್ಮ ಒಂದು ಕಾರಣವಾಗಿದೆ’ ಎಂದು ಧ್ರುವ ಸರ್ಜಾ ಪೋಸ್ಟ್ ಮಾಡಿದ್ದಾರೆ.