ADVERTISEMENT
Sunday, September 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ನಟ, ಅಧಿಕಾರಿ ಕೆ. ಶಿವರಾಮ್ ಇನ್ನಿಲ್ಲ!

ಚಿಕಿತ್ಸೆ ಫಲಕಾರಿಯಾಗದೆ ಸಾವು

Author2 by Author2
February 29, 2024
in State, ರಾಜ್ಯ
Share on FacebookShare on TwitterShare on WhatsappShare on Telegram

ಖ್ಯಾತ ನಟ, ಕನ್ನಡದಲ್ಲಿಯೇ ಪರೀಕ್ಷೆ ಬರೆದು ಯಶಸ್ವಿಯಾದ ಮೊದಲ ವ್ಯಕ್ತಿ ಕೆ. ಶಿವರಾಮ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.

ನಿನ್ನೆಯಷ್ಟೇ ಅವರಿಗೆ ಹೃದಯಾಘಾತವಾಗಿರುವ ಸುದ್ದಿ ಹೊರ ಬಿದ್ದಿತ್ತು. ಜೊತೆಗೆ ಮೆದುಳು ನಿಷ್ಕ್ರೀಯಗೊಂಡಿತ್ತು ಎನ್ನಲಾಗಿದೆ. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Related posts

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

September 20, 2026
ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

September 20, 2026

ಶಿವರಾಮ್ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು ಎಂದು ಅಳಿಯ ಪ್ರದೀಪ್ ಅವರು ನಿನ್ನೆಯಷ್ಟೇ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದರು. ಅವರ ಆರೋಗ್ಯ ಚಿಂತಾಜನಕವಾಗಿದೆ. ಎಲ್ಲರೂ ದೇವರಲ್ಲಿ ಪ್ರಾರ್ಥಿಸಿ ಎಂದು ಮನವಿ ಮಾಡಿಕೊಂಡಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕನ್ನಡದಲ್ಲೇ ಐಎಎಸ್ ಬರೆದಿದ್ದ ಅವರು ಅಧಿಕಾರ ವಹಿಸಿಕೊಂಡ ನಂತರ ಬೆಂಗಳೂರು, ವಿಜಯಪುರ, ಕೊಪ್ಪಳ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಅವರು ಕೆಲಸ ಮಾಡಿದ್ದಾರೆ. ನಂತರ ನಟರಾಗಿ ಬಾ ನಲ್ಲೆ ಮಧುಚಂದ್ರಕೆ, ವಸಂತ ಕಾವ್ಯದಂತಹ ಚಿತ್ರಗಳಲ್ಲಿ ನಟಿಸಿದ್ದಾರೆ.

ಶಿವರಾಮ್ 1953ರ ಏಪ್ರಿಲ್ 6ರಂದು ರಾಮನಗರ ಜಿಲ್ಲೆಯ ಉರಗಳ್ಳಿಯಲ್ಲಿ ಜನಿಸಿದ್ದರು. ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ತಮ್ಮ ಹಳ್ಳಿಯಲ್ಲಿ ಮುಗಿಸಿದ್ದರು. ನಂತರ ಬೆಂಗಳೂರಿನ ಮಲ್ಲೇಶ್ವರಂ ಸರ್ಕಾರಿ ಶಾಲೆಯಲ್ಲಿ ಪ್ರೌಢಶಿಕ್ಷಣ ಪೂರ್ಣಗೊಳಿಸಿದರು. ವಿವಿ ಪುರಂನ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಡಿಗ್ರಿ ಮುಗಿಸಿದ ಶಿವರಾಮ್, 1982ರಲ್ಲಿ ಮೈಸೂರು ಯುನಿವರ್ಸಿಟಿಯಿಂದ ಇತಿಹಾಸ ವಿಷಯದಲ್ಲಿ ಮಾಸ್ಟರ್ ಆಫ್ ಆಟ್ಸ್ ಪದವಿ ಪಡೆದರು. 1985ರಲ್ಲಿ ಕೆಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದರು. ನಂತರ ಕನ್ನಡ ಭಾಷೆಯಲ್ಲಿಯೇ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದ ಭಾರತದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಅಧಿಕಾರ ಸಿಕ್ಕ ನಂತರ ಪ್ರಾಮಾಣಿಕವಾಗಿ ಹಲವು ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸಿದರು.

ಆನಂತರ ಚಿತ್ರರಂಗಕ್ಕೆ ಕಾಲಿಟ್ಟು ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ ಸಿನಿಮಾದಲ್ಲಿ ನಟಿಸಿ ಸೈ ಎನಿಸಿಕೊಂಡರು. ವಸಂತಕಾವ್ಯ, ಸಾಂಗ್ಲಿಯಾನ ಪಾರ್ಟ್ 3, ಪ್ರತಿಭಟನೆ, ಖಳನಾಯಕ, ಯಾರಿಗೆ ಬೇಡ ದುಡ್ಡು, ಗೇಮ್ ಫಾರ್ ಲವ್, ನಾಗ, ಓ ಪ್ರೇಮ ದೇವತೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟೆಸಿದ್ದರು. ಸಿನಿಮಾ ರಂಗದೊಂದಿಗೆ ನಂತರ 2013ರಲ್ಲಿ ರಾಜಕೀಯ ಕೂಡ ಪ್ರವೇಶಿಸಿದರು.

Tags: actorIS officer K. Shivaram is no more!
ShareTweetSendShare
Join us on:

Related Posts

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

by Shwetha
September 20, 2026
0

ರಾಜ್ಯ ರಾಜಕಾರಣದಲ್ಲಿ ಈಗ ವಾಗ್ಯುದ್ಧದ ಪರ್ವ ಶುರುವಾಗಿದೆ. ಉಮರ್ ಖಾಲಿದ್ ವಿಚಾರವಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್...

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

by Shwetha
September 20, 2026
0

ಕರಾವಳಿ ಪ್ರವಾಸದಲ್ಲಿದ್ದಾಗ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಶುಕ್ರವಾರ ಬೆಳ್ಳಂಬೆಳಗ್ಗೆ ಮಂಗಳೂರಿನ ಹಳೆ ಬಂದರಿನ ಮೀನುಗಾರಿಕಾ ಪ್ರದೇಶಕ್ಕೆ ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ತೀವ್ರ ಆಕ್ರೋಶ...

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಬ್ರೇಕ್: ವಿದ್ಯಾರ್ಥಿಗಳ ಮೊಬೈಲ್ ಚಿತ್ರೀಕರಣಕ್ಕೆ ಸರ್ಕಾರದಿಂದ ನಿರ್ಬಂಧ

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಬ್ರೇಕ್: ವಿದ್ಯಾರ್ಥಿಗಳ ಮೊಬೈಲ್ ಚಿತ್ರೀಕರಣಕ್ಕೆ ಸರ್ಕಾರದಿಂದ ನಿರ್ಬಂಧ

by Shwetha
September 20, 2026
0

ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸವನ್ನು ಹೆಚ್ಚು ಸುರಕ್ಷಿತಗೊಳಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಕಾಲೇಜುಗಳು ಆಯೋಜಿಸುವ ಶೈಕ್ಷಣಿಕ ಪ್ರವಾಸಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳು...

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

by Shwetha
September 20, 2026
0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುಟುಂಬದ ಮಾಲೀಕತ್ವದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಬಿಡಿಎ ವತಿಯಿಂದ ಅಕ್ರಮವಾಗಿ ನಿವೇಶನ ಮಂಜೂರು...

ರಾಜಣ್ಣ ನಿವಾಸದಲ್ಲಿ ಸಿದ್ದರಾಮಯ್ಯ ಔತಣಕೂಟ: ಸಚಿವ ಸ್ಥಾನ ಸೇರಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ?

ರಾಜಣ್ಣ ನಿವಾಸದಲ್ಲಿ ಸಿದ್ದರಾಮಯ್ಯ ಔತಣಕೂಟ: ಸಚಿವ ಸ್ಥಾನ ಸೇರಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ?

by Shwetha
September 20, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಿವಿಧ ಕಾರ್ಯಕ್ರಮಗಳ ನಿಮಿತ್ತ ತುಮಕೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಕ್ಯಾತಸಂದ್ರ ನಿವಾಸಕ್ಕೆ ತೆರಳಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram