ಕನ್ನಡದಲ್ಲಿ ಐಎಎಸ್ ಬರೆದು ಯಶಸ್ವಿಯಾಗಿದ್ದ ಮೊದಲ ವ್ಯಕ್ತಿ ಹಾಗೂ ನಟ ಕೆ. ಶಿವರಾಮ್ ಅವರ ಆರೋಗ್ಯ ಗಂಭೀರವಾಗಿದೆ ಎನ್ನಲಾಗಿದೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಸಿಲಿಕಾನ್ ಸಿಟಿಯಲ್ಲಿನ ಎಚ್.ಸಿ.ಜಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪರಿಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಶಿವರಾಮ್ ಅವರು ಬಾ ನಲ್ಲೆ ಮಧುಚಂದ್ರಕೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಾಯಕ ನಟರಾಗಿ ನಟಿಸಿದ್ದರು. ಇದಕ್ಕೂ ಮುನ್ನ ಶಿವರಾಮ್ ಅವರು ಕನ್ನಡದಲ್ಲಿಯೇ ಐಎಎಸ್ ಬರೆದು ಪಾಸ್ ಆಗಿ ಬೆಂಗಳೂರು, ವಿಜಯಪುರ, ಕೊಪ್ಪಳ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ.
ಬಾ ನಲ್ಲೆ ಮಧುಚಂದ್ರಿಕೆ, ವಸಂತ ಕಾವ್ಯದಂತಹ ಚಿತ್ರಗಳಲ್ಲಿ ನಾಯಕರಾಗಿ ನಟಿಸಿದ್ದಾರೆ. ಸಾಂಗ್ಲಿಯಾನ 3 ಚಿತ್ರದಲ್ಲಿ ಖಳನಾಯಕರಾಗಿ ನಟಿಸಿ ಜನರಿಗೆ ಹತ್ತಿರವಾಗಿದ್ದರು. ಆದರೆ, ಕೆಲವು ತಿಂಗಳುಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎನ್ನಲಾಗಿದ್ದು, ಗುಣಮುಖರಾಗಲಿ ಎಂದು ಅಭಿಮಾನಿಗಳು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.