ಎರಡನೇ ಮದುವೆಗಾಗಿ ಕೊರಗಜ್ಜನ ಮೊರೆ ಹೋದ ನಟಿ ಪ್ರೇಮ…
ಕೌಟುಂಬಿಕ ಚಿತ್ರಗಳ ಮೂಲಕ ಎಲ್ಲರ ಮನೆಮಾತಾಗಿದ್ದ ಸ್ಯಾಂಡಲ್ ವುಡ್ ನ ಜನಪ್ರಿಯ ನಟಿ ಪ್ರೇಮ ಎರಡನೇ ಮದುವೆಗೆ ಸಿದ್ಧವಾಗುತ್ತಿದ್ದಾರೆ. ಹಲವು ವರ್ಷಗಳ ಹಿಂದೆ ವಿಚ್ಛೇದನ ಪಡೆದು ಒಂಟಿಯಾಗಿ ಜೀವನ ಸಾಗಿಸುತ್ತಿರುವ ನಟಿ ಪ್ರೇಮಾ ಇದೀಗ 2ನೇ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಕಂಕಣ ಭಾಗ್ಯ ಕರುಣಿಸುವಂತೆ ಕೊರಗಜ್ಜನ ಮೋರೆ ಹೋಗಿದ್ದಾರೆ. ಕಾಪು ಸನ್ನಿಧಿಯಲ್ಲಿ ಮದುವೆಗಾಗಿ ಪ್ರಾರ್ಥನೆ ಮಾಡಿದ್ದಾರೆ.
ಖಾಸಗಿ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಕಾಪು ಕೊರಗಜ್ಜ ನ ಸನ್ನಿದಿಗೆ ನಟಿ ಪ್ರೇಮಾ ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ಈ ವೇಳೆ ನಟಿ ಪ್ರೇಮಾ ತಮ್ಮ ಅಯ್ಯಪ್ಪ ಪತ್ನಿ ನಟಿ ಅನು ಅಯ್ಯಪ್ಪ ಕೂಡ ದೇವಸ್ಥಾನಕ್ಕೆ ಭೇಟಿ ನೀಡಿದ್ರು. ನಟಿ ಪ್ರೇಮ 2016 ರಲ್ಲಿ ಪತಿ ಜೀವನ್ ಅಪ್ಪಚ್ಚು ಅವರ ಜೊತೆಗಿನ 10 ವರ್ಷಗಳ ದಾಂಪತ್ಯ ಜೀವನಕ್ಕೆ ಪರಸ್ಪ ಒಪ್ಪಿಗೆ ಪಡೆದಿ ವಿದಾಯ ಹೇಳಿದ್ರು.
1995 ಶಿವರಾಜ್ ಕುಮಾರ್ ಅಭಿನಯದ ಸವ್ಯಸಾಚಿ ಚಿತ್ರದ ಮೂಲಕ ಸಿನಿಮಾರಂಗ ಪ್ರವೇಶಿಸಿದ ನಟಿ ಪ್ರೇಮಾ ಓಂ ಸಿನಿಮಾ ಮೂಲಕ ಸ್ಟಾರ್ ನಟಿಯಾಗಿ ಗುರುತಿಸಿಕೊಂಡಿದ್ರು. ಆನಂತರ ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲೀ ನಟಿಸಿದ್ದರು. ಯಜಮಾನ ,ಕನಸುಗಾರ, ಆಪ್ತಮಿತ್ರ ಮುಂತಾದ ಹಿಟ್ ಚಿತ್ರಗಳನ್ನ ನೀಡಿದ್ದಾರೆ.
Actor Prema : Actress Prema who approached Koragajja for second marriage…








