ಕೆಜಿಎಫ್ ಚಾಪ್ಟರ್ 2 ಚಿತ್ರ ನೋಡಿ ಮೆಚ್ಚಿಕೊಂಡ ಸೂಪರ್ ಸ್ಟಾರ್ ರಜನಿಕಾಂತ್
ಇಡೀ ಭಾರತದಾದ್ಯಂತ ಧೂಳೆಬ್ಬಿಸುತ್ತಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಚಿತ್ರವನ್ನ ಸೂಪರ್ ಸ್ಟಾರ್ ರಜನಿಕಾಂತ್ ವೀಕ್ಷಿಸಿ ಮೆಚ್ಚಿಕೊಂಡಿದ್ದಾರೆ.
ಗುರುವಾರ ಸಿನಿಮಾ ರಿಲೀಸ್ ಆದ ಮೊದಲ ದಿನವೇ ಚೆನ್ನೈನ ಚಿತ್ರಮಂದಿರದಲ್ಲಿ ರಜನಿಕಾಂತ್ ಕೆಜಿಎಫ್ ಚಾಪ್ಟರ್ 2 ಅನ್ನು ವೀಕ್ಷಿಸಿದ್ದಾರೆ. ತಲೈವಾ ಕನ್ನಡ ವರ್ಷನ್‌ನಲ್ಲಿಯೇ ಸಿನಿಮಾವನ್ನು ವೀಕ್ಷಿಸಿ ಮೆಚ್ಚಿಕೊಂಡಿರುವುದು ವಿಶೇಷ.
ಶುಕ್ರವಾರ ಬೆಳಗ್ಗೆ ನಿರ್ಮಾಪಕರಾದ ವಿಜಯ್ ಕಿರಂಗದೂರ್‌ಗೆ ಕರೆ ಮಾಡಿದ ಸೂಪರ್ ಸ್ಟಾರ್, ಒಳ್ಳೆಯ ಸಿನಿಮಾ ಮಾಡಿದ್ದೀರಾ ಎಂದು ಹೇಳುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸೂಪರ್‌ಸ್ಟಾರ್ ರಜನಿಕಾಂತ್ ಅವರು ಕೆಜಿಎಫ್ -2 ಚಿತ್ರವನ್ನ ನೋಡಿ ಬ್ಲಾಕ್‌ಬಸ್ಟರ್ ಚಿತ್ರಕ್ಕಾಗಿ ಚಿತ್ರದ ಪಾತ್ರವರ್ಗ ಮತ್ತು ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ ಎಂದು ಮನೋಬಾಲಾ ವಿಜಯಬಾಲನ್ ಅವರು ತಮ್ಮ ಟ್ವೀಟರ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.








