ಅವತಾರ ಪುರುಷ ಸಿನಿಮಾ ಶೂಟಿಂಗ್ ವೇಳೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ನಟ ಶರಣ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಗರದ ಹೆಚ್ ಎಂಟಿ ಗ್ರೌಂಡ್ ನಲ್ಲಿ ಅವತಾರ ಪುರುಷ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ಅವರಿಗೆ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡಿದೆ.
ಹೀಗಾಗಿ ಕೂಡಲೇ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಕೃಷಿ ಮಸೂದೆ ವಿರೋಧಿಸಿ ‘ರೈತರಿಗಾಗಿ ಮಾತನಾಡಿ’ ಅಭಿಯಾನ
ಸಿಂಪಲ್ ಸುನಿ ನಿರ್ದೇಶನ ಅವತಾರ ಪುರುಷ ಸಿನಿಮಾಗೆ ಆಶಿಕಾ ರಂಗನಾಥ್ ನಾಯಕಿಯಾಗಿದ್ದಾರೆ.
ಕೋವಿಡ್ 19 ಪರಿಣಾಮ ಇದರ ಶೂಟಿಂಗ್ ಸ್ಥಗಿತಗೊಂಡಿತ್ತು. ಇದೀಗ ಸರ್ಕಾರ ಮಾರ್ಗ ಸೂಚಿ ಅನ್ವಯ ಚಿತ್ರತಂಡ ಕೊನೆಯ ಹಂತದ ಶೂಟಿಂಗ್ ನಲ್ಲಿ ತೊಡಗಿಕೊಂಡಿತ್ತು








