ನಟ ಶಿವರಾಜ್ ಕುಮಾರ್ ಅವರಿಗೆ ಅಮೆರಿಕಾದ ಮಿಯಾಮಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ನಡೆದ ಕಿಡ್ನಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ಆಪ್ತ ಮೂಲಗಳು ತಿಳಿಸಿವೆ. ಡಾ. ಮುರುಗೇಶ್ ಅವರ ನೇತೃತ್ವದಲ್ಲಿ ಡಿ. 24ರಂದು ಸಂಜೆ 6 ಗಂಟೆಗೆ ಶಸ್ತ್ರಚಿಕಿತ್ಸೆ ಪ್ರಾರಂಭವಾಗಿ, ರಾತ್ರಿ 12 ಗಂಟೆಗೆ ಪೂರ್ಣಗೊಂಡಿದೆ. ವೈದ್ಯರು ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿದ ಬಗ್ಗೆ ದೃಢಪಡಿಸಿದ್ದಾರೆ.
ಶಿವರಾಜ್ ಕುಮಾರ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದ್ದು, 2025ರ ಜನವರಿ 25ರಂದು ಭಾರತಕ್ಕೆ ವಾಪಾಸಾಗಲಿದ್ದಾರೆ. ಶಿವಣ್ಣನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿರುವುದು ಅವರ ಅಭಿಮಾನಿಗಳಲ್ಲಿ ಹಾಗೂ ಚಿತ್ರರಂಗದಲ್ಲಿ ಸಂತೋಷ ಮೂಡಿಸಿದೆ