ಥ್ರಿಲ್ಲರ್ ಕಥೆಯುಳ್ಳ ಅನಾವರಣದ ಟ್ರೈಲರ್ ನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದಾರೆ.
ಈ ಚಿತ್ರದ ಹಾಡು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸದ್ಯ ಸಾಕಷ್ಟು ಸದ್ದು ಮಾಡುತ್ತಿವೆ. ಎಮೋಷನ್, ಲವ್ ಹಾಗೂ ಥ್ರಿಲರ್ ಅಂಶಗಳಿಂದ ಕೂಡಿರುವ ಈ ಸಿನಿಮಾದ ಟ್ರೈಲರ್ ನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದಾರೆ. ಚಿತ್ರ ತಂಡದ ಪರಿಶ್ರಮಕ್ಕೆ ಜಯ ಸಿಗಲಿ. ಡಿಸೆಂಬರ್ 1ಕ್ಕೆ ಸಿನಿಮಾ ಬಿಡುಗಡೆ ಆಗುತ್ತಿದೆ. ಟ್ರೈಲರ್ ನೋಡ್ತಾ ಇರಬೇಕಾದ್ರೆ ಬಹಳ ಪರಿಚಯಸ್ಥರು ತುಂಬ ಜನ ಸಿನಿಮಾದಲ್ಲಿದ್ದಾರೆ ಅನ್ನಿಸಿತು. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಸುದೀಪ್ ಟ್ರೈಲರ್ ಬಿಡುಗಡೆ ಮಾಡಿದ ನಂತರ ಹೇಳಿದ್ದಾರೆ.
ಹರೀಶ್ ಕುಮಾರ್ ಹಾಗೂ ಮಂಜುನಾಥ್ ಪಿಳ್ಳಪ್ಪ ಜಂಟಿಯಾಗಿ ಈ ಸಿನಿಮಾದ ನಿರ್ದೇಶನ ಮಾಡಿದ್ದಾರೆ. ಹರೀಶ್ ಕುಮಾರ್ ಹಾಗೂ ಮಂಜುನಾಥ್ ಪಿಳ್ಳಪ್ಪ ರಂಗ ಕಲಾವಿದರಾಗಿದ್ದಾರೆ. 40ಕ್ಕೂ ಅಧಿಕ ಕಿರು ಚಿತ್ರಗಳನ್ನು ಮಾಡಿರುವ ಅನುಭವ ಈ ಇಬ್ಬರು ನಿರ್ದೇಶಕರಿಗೆ ಇದೆ. ಡಾ.ವಿ.ನಾಗೇಂದ್ರ ಪ್ರಸಾದ್ ಮತ್ತು ಶಶಿಕುಮಾರ್ ಬೆಳಕವಾಡಿ ಸಾಹಿತ್ಯ ಒದಗಿಸಿದ್ದಾರೆ. ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಮಾಡಿದ್ದಾರೆ. ಬಿ.ಆರ್.ಹೇಮಂತ್ ಕುಮಾರ್ ಹಿನ್ನಲೆ ಸಂಗೀತ ನೀಡಿದ್ದಾರೆ.