ಬೆಂಗಳೂರು:ಕನ್ನಡದ ಖ್ಯಾತ ನಟ ಸುದೀಪ್ ತಾಯಿ ಇಹಲೋಕ ತ್ಯಜಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ (Kiccha Sudeep) ತಾಯಿ ಸರೋಜಾ ಅವರು ಭಾನುವಾರ ಸಾವನ್ನಪ್ಪಿದ್ದಾರೆ.
ಅನಾರೋಗದ್ಯದ ಹಿನ್ನೆಲೆಯಲ್ಲಿ ಸುದೀಪ್ ತಾಯಿ ಸರೋಜಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಯ ವೇಳೆಗೆ ಕುಟುಂಬಸ್ಥರು ಪಾರ್ಥಿವ ಶರೀರವನ್ನು ಜೆಪಿ ನಗರದ ನಿವಾಸಕ್ಕೆ ತರಲಾಗುವುದು. ಆನಂತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎನ್ನಲಾಗಿದೆ.








