ಕಾಲಿವುಡ್ (Kollywood) ಜೋಡಿ ನಟ ಸೂರ್ಯ (Suriya) ಹಾಗೂ ನಟಿ ಜ್ಯೋತಿಕಾ (Jyothika) ಅವರು ಕೊಲ್ಲೂರು ಮೂಕಾಂಬಿಕೆ (Kollur Mookambika Temple) ಸನ್ನಿಧಿಗೆ ತೆರಳಿ ತಾಯಿಯ ದರ್ಶನ ಮಾಡಿದ್ದಾರೆ.
ಉಡುಪಿ ಜಿಲ್ಲೆ ಬೈಂದೂರಿನ ಕೊಲ್ಲೂರಿಗೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ. ದೇಗುಲದಲ್ಲಿ ನಡೆಸುವ ವಿಶೇಷ ಚಂಡಿಕಾಯಾಗದಲ್ಲಿ ಭಾಗಿಯಾಗಿ, ದೇವರ ದರ್ಶನ ಪಡೆದರು. ಶಕ್ತಿ ದೇವತೆ ಮೂಕಾಂಬಿಕೆಗೆ ವಿಶೇಷ ಸೇವೆ ಸಲ್ಲಿಕೆ ಮಾಡಿ ತೆರಳಿದ್ದಾರೆ. ಈ ಸಂದರ್ಭದಲ್ಲಿ ನೆಚ್ಚಿನ ಜೋಡಿ ಸೂರ್ಯ ದಂಪತಿ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದರು.








