ಉಸಿರಾಟದ ಸಮಸ್ಯೆ : ನಟ ವಿಜಯಕಾಂತ್ ಆಸ್ಪತ್ರೆಗೆ ದಾಖಲು

1 min read
vijaykant

ಉಸಿರಾಟದ ಸಮಸ್ಯೆ : ನಟ ವಿಜಯಕಾಂತ್ ಆಸ್ಪತ್ರೆಗೆ ದಾಖಲು

ಚೆನ್ನೈ: ನಟ, ದೇಸಿಯ ಮುರಪೊಕ್ಕು ದ್ರಾವಿಡ ಕಳಗಂ(ಡಿಎಂಡಿಕೆ) ಸಂಸ್ಥಾಪಕ ವಿಜಯಕಾಂತ್ ಉಸಿರಾಟದ ಸಮಸ್ಯೆಯಿಂದ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇಂದು ಮುಂಜಾನೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಬೆಳಗ್ಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಚೆನ್ನೈನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.

ಸದ್ಯ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ವಿಜಯಕಾಂತ್ ರವರು ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಒಂದೆರಡು ದಿನಗಳಲ್ಲಿ ಡಿಸ್ಚಾರ್ಜ್ ಆಗುವ ನಿರೀಕ್ಷೆಯಿದೆ.

vijaykant

ಆಸ್ಪತ್ರೆಯವರಿಂದ ಹೆಚ್ಚಿನ ಮಾಹಿತಿಗಾಗಿ ಕಾಯುತ್ತಿದ್ದೇವೆ ಎಂದು ಅವರ ಪಕ್ಷದ ಸದಸ್ಯರು ತಿಳಿಸಿದ್ದಾರೆ.

2020ರಲ್ಲಿ ವಿಜಯಕಾಂತ್ ರವರು ಕೋವಿಡ್ ಸೋಂಕಿನಿಂದ ಬಳಲಿದ್ದರು. ಚೆನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು ಹಾಗೂ ಚಿಕಿತ್ಸೆ ಪಡೆದ ಕೆಲವು ದಿನಗಳ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.

 

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd