ಅನ್ನ ತಿನ್ನುತ್ತಿಲ್ಲವೇ.. ನಟ-ನಟಿಯರು ರೈತ ಪ್ರತಿಭಟನೆ ಬೆಂಬಲಿಸಬೇಕು : ಸಿದ್ದರಾಮಯ್ಯ
ಬೆಂಗಳೂರು : ಈ ಮಣ್ಣಿನ ಎಲ್ಲಾ ಸಾಹಿತಿಗಳು, ಕಲಾವಿದರು ವಿಶೇಷವಾಗಿ ಸಿನಿಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನ ಬೆಂಬಲಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೇಂದ್ರ ಸರ್ಕಾರದ ನಡೆಯನ್ನು ವಿರೋಧಿಸಿ, ಹಾಗೂ ದೇಶದ ರಾಜಧಾನಿಯಲ್ಲಿ ನಡೆಸುತ್ತಿರುವ ರೈತರ ಪ್ರತಿಭಟನೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ.
ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ.
ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು ವಿಶೇಷವಾಗಿ ಸಿನೆಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು.
ನಾವೆಲ್ಲರೂ ರೈತರು ಬೆಳೆದ ಅನ್ನ ತಿನ್ನುವವರಲ್ಲವೇ? ಎಂದು ಖಾರವಾಗಿ ಬರೆದುಕೊಂಡಿದ್ದಾರೆ.
ಇಲ್ಲದೇ ಫೆಬ್ರವರಿ 6ರಂದು ರೈತರು ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಬಂದ್ ಗೆ ಕರೆ ಕೊಟ್ಟಿದ್ದಾರೆ. ಈ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel