ಕೊರೊನಾ ಹೆಮ್ಮಾರಿಗೆ ಬಲಿಯಾದ ನಟಿ ಅಭಿಲಾಷಾ ಪಾಟೀಲ್
ಮುಂಬೈ : ದೇಶದಲ್ಲಿ ಕೊರೊನಾ ಹೆಮ್ಮಾರಿಯಿಂದ ನಿತ್ಯ ಸಾವಿರಾರು ಜನರು ಪ್ರಾಣ ಕಳೆದುಕೊಳ್ತಿದ್ದಾರೆ. ಸ್ಯಾಂಡಲ್ ವುಡ್ , ಬಾಲಿವುಡ್ , ಕಾಲಿವುಡ್ , ಮಾಲಿವುಡ್ , ಟಾಲಿವುಡ್ ಸೇರಿ ಸಿನಿಮಾರಂಗದವರು, ಸೆಲೆಬ್ರಿಟಿಗಳು ತಾರೆಯರು ಕೂಡ ಮಹಾಮಾರಿಗೆ ಬಲಿಯಾಗಿದ್ದಾರೆ. ಇದೀಗ ಮತ್ತೊಬ್ಬ ತಾರೆ ಕೊರೊನಾಗೆ ಬಲಿಯಾಗಿದ್ದಾರೆ. ಬಾಲಿವುಡ್ ಹಾಗೂ ಹಲವು ಮರಾಠಿ ಸಿನಿಮಾಗಳಲ್ಲಿ ನಟಿಸಿದ್ದ ನಟಿ ಅಭಿಲಾಷಾ ಪಾಟೀಲ್ ಕೋವಿಡ್ ನಿಂದಾಗಿ ನಿಧನ ಹೊಂದಿದ್ದಾರೆ.
ನಟಿ ಅಭಿಲಾಷಾ ಅವರು ಕೆಲವು ದಿನಗಳ ಹಿಂದಷ್ಟೆ ಸಿನಿಮಾ ಒಂದರ ಚಿತ್ರೀಕರಣಕ್ಕಾಗಿ ಬನಾರಸ್ಗೆ ತೆರಳಿದ್ದರು. ಅಲ್ಲಿ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಮುಂಬೈಗೆ ವಾಪಸ್ಸಾದ ಬಳಿಕ ಪರೀಕ್ಷೆಗೊಳಗಾದಾಗ ಕೋವಿಡ್ ಇರುವುದು ಗೊತ್ತಾಗಿದೆ. ಕೆಲವು ದಿನಗಳ ಬಳಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅಭಿಲಾಷಾ ಅವರಿಗೆ ಕೋವಿಡ್ ನೆಗೆಟಿವ್ ಆಗಿತ್ತಾದರೂ ಆ ವೇಳೆಗಾಗಲೆ ಕೋವಿಡ್ನಿಂದ ಅವರಿಗೆ ಅಂಗಾಂಗ ವೈಫಲ್ಯ ಉಂಟಾಗಿತ್ತು ಎಂದು ಅವರ ಸಹ ಸಂಜಯ್ ಕುಲಕರ್ಣಿ ತಿಳಿಸಿದ್ದಾರೆ. ಅಭಿಲಾಶಾ ಅವರು ತಮ್ಮ 47 ನೇ ವಯಸ್ಸಿಗೆ ಬದುಕಿನ ಜರ್ನಿ ಕೊನೆಗೊಳಿಸಿದ್ದಾರೆ.
ಸರ್ಕಾರದ ಜೊತೆ ಕೊರೊನಾ ವಿರುದ್ಧ ಹೋರಾಟದಲ್ಲಿ ಜನರು ಕೈಜೋಡಿಸಬೇಕಾಗಿದೆ. ಜನರು ಸುಖಾಸುಮ್ಮನೆ ಅನಗತ್ಯವಾಗಿ ಹೊರಗಡೆ ಓಡಾಡದೇ , ಗುಂಪಿನಲ್ಲಿ ಬೆರೆಯದೇ , ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ತಮ್ಮನ್ನ ತಾವು ರಕ್ಷಣೆ ಮಾಡಿಕೊಳ್ಳಬೇಕಿದೆ.