ನವದೆಹಲಿ : ಹೆಮ್ಮಾರಿ ಕೊರೊನಾ ವೈರಸ್ ಗೆ ತುತ್ತಾಗಿದ್ದ ಮರಾಠಿ ನಟಿ ಆಶಾಲತಾ ವಾಬ್ ಗಾಂವ್ಕರ್ ಇಂದು ಕೊನೆಯುಸಿರೆಳೆದಿದ್ದಾರೆ.
ಮಹಾರಾಷ್ಟ್ರದ ಸತಾರಾದಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಳೆದ ಕೆಲವು ದಿನಗಳಿಂದ ಆಶಾಲತಾ ಅವರು ಚಿಕಿತ್ಸೆ ಪಡೆಯುತ್ತಿದ್ದರು.
ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ 4.45ಕ್ಕೆ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿದ್ದು, ತಮ್ಮ ಮಗನನ್ನು ಅಗಲಿದ್ದಾರೆ.
ಆಶಾಲತಾ ಅವರು ಇತ್ತೀಚೆಗೆ ಸತಾರದಲ್ಲಿ ಆಯ್ ಮಜಿ ಕಲುಬಾಯಿ ಎಂಬ ಪೌರಾಣಿಕ ಶೋವೊಂದರ ಶೂಟಿಂಗ್ ನಲ್ಲಿ ತೊಡಗಿದ್ದರು.
ಆ ಟಿವಿ ಸೀರಿಯಲ್ ತಂಡದಲ್ಲಿ ಆಶಾಲತಾ ಸೇರಿ 20 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಹೊಸ ಸುದ್ದಿಗಳನ್ನು ಇಲ್ಲಿ ಓದಿ
ಎಲ್ಲರನ್ನೂ ಸಹ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಶಾಲತಾ ಅವರ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿತ್ತು. ಹೊಸ ಸುದ್ದಿಗಳನ್ನು ಇಲ್ಲಿ ಓದಿ
ಹೀಗಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.