ನಟಿ ಹರಿಪ್ರಿಯಾ (Hariprriya) ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಬೇಬಿ ಬಂಪ್ (Baby Bump) ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ.
ಪತಿ ವಶಿಷ್ಠ ಸಿಂಹ ಅವರೊಂದಿಗೆ ನಿಂತು ನಟಿ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಗೂ ವಿಡಿಯೋ ಶೇರ್ ಮಾಡಿದ್ದು, ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.
ಫೋಟೋಶೂಟ್ಗೆ ಕನ್ನಡ ಹಬ್ಬದ ಸಲುವಾಗಿ.. ನಾವು ಎಂದು ಹರಿಪ್ರಿಯಾ ದಂಪತಿ ಕ್ಯಾಪ್ಷನ್ ನೀಡಿದ್ದಾರೆ. ಹರಿಪ್ರಿಯಾ ಮತ್ತು ವಸಿಷ್ಠಸಿಂಹ ಹಲವು ವರ್ಷಗಳಿಂದ ಪ್ರೀತಿಸಿ, ಪರಸ್ಪರ ಒಪ್ಪಿ ಮದುವೆಯಾಗಿದ್ದಾರೆ. 2023ರಲ್ಲಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು.