ನಟಿ ಜಾಕ್ವೆಲಿನ್ ಮನೆಗೆ ಬೆಂಕಿ ಬಿದ್ದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದೆ.
ನಟಿ ಜಾಕ್ವೆಲಿನ್ ಸದ್ಯ ಸುಕೇಶ್ ಚಂದ್ರಶೇಖರ್ ಪ್ರಕರಣದಲ್ಲಿ ಕೋರ್ಟ್ ಗೆ ಅಲೆಯುತ್ತಿದ್ದಾರೆ. ಇದರ ಮಧ್ಯೆ ಈ ಘಟನೆ ನಡೆದಿದ್ದು, ಅಭಿಮಾನಿಗಳು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಮುಂಬಯಿನಲ್ಲಿನ ಅವರ ನಿವಾಸಕ್ಕೆ ಬೆಂಕಿ ಬಿದ್ದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಆಗಮಿಸಿ, ಬೆಂಕಿ ನಂದಿಸಿವೆ ಎಂದು ತಿಳಿದು ಬಂದಿದೆ. ಜಾಕ್ವೆಲಿನ್ ಉಳಿದುಕೊಂಡಿರುವ ಅಪಾರ್ಟ್ಮೆಂಟ್ನ 14ನೇ ಮಹಡಿಗೆ ಬೆಂಕಿ ಬಿದ್ದಿದೆ. ಜಾಕ್ವೆಲಿನ್ ಮನೆ 15ನೇ ಮಹಡಿಯಲ್ಲಿದೆ. ಈ ಸಂದರ್ಭದಲ್ಲಿ ನಟಿ ಶೂಟಿಂಗ್ವೊಂದಕ್ಕಾಗಿ ದುಬೈಗೆ ಹೋಗಿದ್ದಾರೆ ಎನ್ನಲಾಗಿದೆ. ಹೀಗಾಗಿ ನಟಿ ಸೇಫ್ ಆಗಿದ್ದಾರೆ. ಬೆಂಕಿ ಹೊತ್ತಿಕೊಂಡಿರುವ ಕುರಿತು ನಿಖರ ಮಾಹಿತಿ ಇಲ್ಲ. ಆದರೂ ಸ್ಥಳದಲ್ಲಿ ಆತಂಕ ಮನೆ ಮಾಡಿದೆ.