ಖ್ಯಾತ ನಟಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ವಿಚ್ಛೇದನ ಪಡೆಯಲಿದ್ದಾರೆ ಎಂಬ ಸುದ್ದಿ ಸಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳು ಶಾಕ್ ಆಗಿದ್ದಾರೆ.
ಬೆಸ್ಟ್ ಕಪಲ್ ಆಗಿ ಹೈಲೆಟ್ ಆಗಿದ್ದ ನಯನತಾರಾ ಮತ್ತು ವಿಘ್ನೇಶ್ ಶಿವನ್ ಬೇರೆ ಬೇರೆಯಾಗುತ್ತಿರುವ ಸುದ್ದಿ ಕೇಳಿ ಅಭಿಮಾನಿಗಳು ಬೇಸರಿಸಿಕೊಳ್ಳುತ್ತಿದ್ದಾರೆ. ನಟಿ ನಯನತಾರಾ ಅವರು ಪತಿ ವಿಘ್ನೇಶ್‌ರನ್ನು ಅನ್‌ಫಾಲೋ ಮಾಡಿರುವುದೇ ಇದಕ್ಕೆ ಪುಷ್ಠಿ ನೀಡುತ್ತಿದೆ.
ನಯನತಾರಾ ಅನ್‌ಫಾಲೋ ಮಾಡಿ ಈಗ ಕಣ್ಣಲ್ಲಿ ನೀರು ಬರುತ್ತಿದ್ದರೂ ಇದು ನನಗೆ ಸಿಕ್ಕಿತು ಎಂದು ಬರೆದುಕೊಂಡಿದ್ದಾರೆ. ಹೀಗಾಗಿ ಅಭಿಮಾನಿಗಳು ಇಬ್ಬರ ಮಧ್ಯೆ ಬಿರುಕು ಬಿಟ್ಟಿರಬಹುದು ಎಂದು ಶಂಕಿಸಿದ್ದಾರೆ. ಹಲವು ವರ್ಷಗಳ ಕಾಲ ಪ್ರೀತಿಸಿ, ಕಳೆದ ವರ್ಷ ನಯನತಾರಾ- ವಿಘ್ನೇಶ್ ಶಿವನ್ ಅದ್ಧೂರಿಯಾಗಿ ಮದುವೆಯಾಗಿದ್ದರು. ಬಾಡಿಗೆ ತಾಯ್ತನದ ಮೂಲಕ ಅವಳಿ ಮಕ್ಕಳನ್ನು ಕೂಡ ಪಡೆದಿದ್ದರು. ಸದ್ಯ ಈ ಸುದ್ದಿ ಕೇಳಿ ಅಭಿಮಾನಿಗಳು ಬೇಸರಿಸಿಕೊಳ್ಳುತ್ತಿದ್ದಾರೆ.








